Saturday, April 6, 2024

ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ.

ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...