Saturday, April 6, 2024

ಬಂಟ್ವಾಳ-ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಬಕಾರಿ ಕಾಯ್ದೆ ಪ್ರಕರಣದಡಿ ಪ್ರಕರಣ ದಾಖಲು

ಬಂಟ್ವಾಳ ‌ಹಾಗೂ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಬಕಾರಿ ಕಾಯ್ದೆ ಪ್ರಕರಣದಡಿ ಎರಡು ಪ್ರಕರಣಗಳು ದಾಖಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿ ಎಂಬಲ್ಲಿ ಮೈದಾನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ದಾಳಿ ನಡೆಸಿ ಓರ್ವನ ಬಂಧಿಸಿ ಆತನಿಂದ ಮಾರಾಟ ಮಾಡಲು ತಂದಿದ್ದ ಮದ್ಯ ಹಾಗೂ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಣಿ ಸಾಗು ನಿವಾಸಿ ಸಾಗು ಮನೆ ಪುಷ್ಪರಾಜ ಶೆಟ್ಟಿ ಎಂಬವನ ಮೇಲೆ ಅಬಕಾರಿ ಕಾಯ್ದೆ ಯಡಿ ಪ್ರಕರಣ ದಾಖಲಾಗಿದ್ದು, ಆತನಿಂದ 2220 ಮೌಲ್ಯದ 5.85 ಲೀಟರ್ ಮದ್ಯ ಹಾಗೂ 950 ನಗದು ಸಹಿತ ಟಿ‌ವಿಎಸ್ ಸ್ಕೂಟರ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈತನ ಜೊತೆಗೆ ಮಾಣಿ ಪ್ರಶಾಂತ್ ವೈನ್ ಶಾಪ್ ನ ವೆಂಡರ್ ಕೂಡ ಆರೋಪಿಯಾಗಿದ್ದಾನೆ.

ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ ಸಜೀಪ ಮುನ್ನೂರು ಗ್ರಾಮದ ನಂದಾವರ ಪಡ್ಪು ನಿವಾಸಿ ಮೊಹಮದ್ ಶಾಕೀರ್ ಎಂಬಾತನನ್ನು ಕೂಡ ಬಂಧಿಸಿದ್ದು ಈತನ ಮೇಲೆ ಕೂಡ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...