Saturday, April 6, 2024

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಮಂಗಳೂರು: ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ ಎಂದು ಗುರುತಿಸಲಾಗಿದೆ.

ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು ಪ್ರಕರಣಗಳಿವೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರ ಆದೇಶದಂತೆ ಎಸಿಪಿ ಧನ್ಯ ಎಸ್ ನಾಯಕ್ ಅವರ ಮಾರ್ಗದರ್ಶನದಲ್ಲಿಕೊಣಾಜೆ ಇನ್ಸ್ ಪೆಕ್ಟರ್ ಕೀರ್ತಿಕುಮಾರ್, ಪಿಎಸ್ ಐ ಅಶೋಕ್, ಸಿಬ್ಬಂದಿಗಳಾದ ಶಿವಕುಮಾರ್ ಮತ್ತು ಪುರುಷೋತ್ತಮ್ ಆರೋಪಿಯನ್ನು ಬಂಧಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...