Saturday, April 20, 2024

ಅಪ್ರಾಪ್ತ ಶಾಲಾ ಬಾಲಕಿಗೆ ಬಸ್ ಕಂಡೆಕ್ಟರ್ ನಿಂದ ಲೈಂಗಿಕ ಕಿರುಕುಳ : ಅರ್ಧ ಗಂಟೆಯಲ್ಲೇ ಆರೋಪಿ ಅರೆಸ್ಟ್

ಬಂಟ್ವಾಳ: ಬಾಗಲಕೋಟೆ ನಿವಾಸಿ ಬಿಸಿರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ನಿರ್ವಾಹಕ ದವಾಳ್ ಸಾಬ್ ಎಂಬಾತನನ್ನು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಕಲ್ಲಡ್ಕ ಶಾಲೆಯೊಂದರ  ವಿದ್ಯಾರ್ಥಿನಿಯಾಗಿದ್ದು, ಇಂದು ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿಸಿರೋಡಿಗೆ ಬರುವ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನೊಂದ ಬಾಲಕಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಕಲ್ಲಡ್ಕದಿಂದ ಬರುವ ವೇಳೆ ಪಾಣೆಮಂಗಳೂರು ಬಸ್ ಸ್ಟಾಪ್ ನಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದು ಹೋಗಿದ್ದರು. ಅ ಸಂದರ್ಭದಲ್ಲಿ ಬಸ್ ನಲ್ಲಿ ನೊಂದ ಬಾಲಕಿ,ಬಸ್ ಚಾಲಕ ಮತ್ತು ನಿರ್ವಾಹಕ ಮೂರೇ ಜನ ಇದ್ದ ವೇಳೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರ ತಂಡ ಬಂಧಿಸಿದೆ.

More from the blog

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...