Friday, April 12, 2024

ವಿವಿಧೆಡೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ; ಧರ್ಮಸ್ಥಳಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ ಭೇಟಿ

ಬೆಳ್ತಂಗಡಿ: ದ.ಕ. ಜಿಲ್ಲೆಯಾದ್ಯಂತ ಇಂದು ಬಿಜೆಪಿ ವತಿಯಿಂದ ಹಮ್ಮಿಕೊಂಡ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಹಿತ ರಾಜ್ಯದ ಪ್ರಮುಖರು ಬೆಳ್ತಂಗಡಿಗೆ ಆಗಮಿಸಿದ್ದಾರೆ.

ವಿಜಯ ಸಂಕಲ್ಪ ಯಾತ್ರೆಯ ಹಿನ್ನೆಲೆ ಮಂಗಳೂರಿನಿಂದ ಆಗಮಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರ‍್ಯಾಲಿ ನಡೆಸುವ ಹಿನ್ನೆಲೆ ಅವರು ಇದೀಗ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಅವರು ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಅಲ್ಲಿಂದ ನೇರವಾಗಿ ಬೆಳ್ತಂಗಡಿ ಮಾರ್ಗವಾಗಿ ಆಗಮಿಸಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನ ಸಮೀಪದಿಂದ ತಾಲೂಕಿನ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ವಾಣಿ ಕಾಲೇಜು ಮೈದಾನದಿಂದ ಲಾಯಿಲ ವೆಂಕಟ್ರಮಣ ದೇವಸ್ಥಾನದವರೆಗೆ ರೋಡ್ ಶೋ ನಡೆಸಲಿರುವರು.
ಈ ವೇಳೆ ಮಾಜಿ ಸಚಿವರಾದ ಈಶ್ವರಪ್ಪ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕ ಹರೀಶ್ ಪೂಂಜ, ವಿ.ಪ.ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸಹಿತ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ. ಬಳಿಕ ಬಂಟ್ವಾಳ, ಸುಳ್ಯ, ಪುತ್ತೂರು, ಮೂಡಬಿದ್ರೆಯಲ್ಲಿ ರ‍್ಯಾಲಿ ನಡೆಸಲಿರುವರು.

 

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...