Friday, April 5, 2024

ಶ್ರವಣಬೆಳಗೊಳದ ಸ್ವಾಮೀಜಿ ರಚಿಸಿದ ಹೆಗ್ಗಡೆಯವರ ಕಲಾಕೃತಿ

ಉಜಿರೆ: ಶ್ರವಣಬೆಳಗೊಳದ ಜೈನಮಠದ ನೂತನ ಭಟ್ಟಾರಕರಾಗಿ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಎಂಬ ನಾಮಕರಣದೊಂದಿಗೆ ಪಟ್ಟಾಭಿಷಿಕ್ತರಾದ ಸ್ವಾಮೀಜಿ ತಮ್ಮ ಪೂರ್ವಾಶ್ರಮದಲ್ಲಿ ಅಪೂರ್ವ ಚಿತ್ರಕಲಾವಿದರೂ ಆಗಿದ್ದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಕಲಾಕೃತಿಯನ್ನು ರಚಿಸಿ ಅವರು ಎರಡು ವರ್ಷಗಳ ಹಿಂದೆ ಹೆಗ್ಗಡೆಯವರಿಗೆ  ಸಮರ್ಪಿಸಿದ್ದರು.   ಅವರ ಕಲಾಕೌಶಲವನ್ನು ಶ್ಲಾಘಿಸಿ ಹೆಗ್ಗಡೆಯವರು ಅವರನ್ನು ಅಭಿನಂದಿಸಿದ್ದರು. ಈ ಕಲಾಕೃತಿಯನ್ನು ಧರ್ಮಸ್ಥಳದಲ್ಲಿ ಗ್ರಂಥಾಲಯದಲ್ಲಿ ಸಂರಕ್ಷಿಸಿ ಪ್ರದರ್ಶನಕ್ಕೆ ಇಡಲಾಗಿದೆ.

ಪೂರ್ವಾಶ್ರಮದಲ್ಲಿ ಆಗಮ ಇಂದ್ರ ಎಂಬ ಹೆಸರನ್ನು ಹೊಂದಿದ್ದ ಅವರು ಪದವಿಪೂರ್ವ ಶಿಕ್ಷಣ (ಪಿ.ಯು.ಸಿ.)ವನ್ನು ಉಜಿರೆಯಲ್ಲಿ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪೂರೈಸಿದ್ದರು. ಆಗ ಸಿದ್ದವನ ಗುರುಕುಲದಲ್ಲಿ ವಾಸ್ತವ್ಯ ಇದ್ದರು.
ಅವರ ತಾಯಿ ಮೂಲತಃ ಉಜಿರೆ ನಿವಾಸಿಯಾಗಿದ್ದರು.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...