Saturday, April 6, 2024

ಭಕ್ತಾಧಿಗಳೇ ಗಮನಿಸಿ… ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದರ್ಶನ ಸಮಯ ಬದಲಾವಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 16ರಂದು ರಾತ್ರಿ 8 ಗಂಟೆಯಿಂದ ಹೊರಾಂಗಣದಲ್ಲಿ ಮಾತ್ರ ದೇವರ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಅದಲ್ಲದೆ ಧರ್ಮಸ್ಥಳ ದೇಗುಲದಲ್ಲಿ ಮಾರ್ಚ್ 18ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮುಖ್ಯವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಧರ್ಮಸ್ಥಳ ದೇವಸ್ಥಾನದ ವತಿಯಿಂದ ಮಾಹಿತಿ ನೀಡಲಾಗಿದೆ.

ಧರ್ಮಸ್ಥಳ ಮಂಜುನಾಥ ದೇವರ ದರ್ಶನಕ್ಕಾಗಿ ಭೇಟಿ ನೀಡುವ ಭಕ್ತರು ಈ ಮೇಲಿನ ಸೂಚನೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಮಾಹಿತಿ ನೀಡಲಾಗಿದೆ.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...