Friday, April 12, 2024

ವಿಧಾನಸಭಾ ಚುನಾವಣಾ ಹಿನ್ನೆಲೆ : ದ.ಕ.ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ

ಮುಂದಿನ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯದ ಹಿರಿಯ ಪೋಲೀಸ್ ಅಧಿಕಾರಿಗಳ ನಿರ್ದೇಶನದ ಮೆರೆಗೆ ದ.ಕ.ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಯವರು ದ.ಕ.ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಿದ್ದು,ಸಾರಡ್ಕದಲ್ಲಿ ಹೆಚ್ಚಿನ ನಿಗಾ ವಹಿಸಿದ್ದಾರೆ.

ಕೇರಳ ರಾಜ್ಯಕ್ಕೆ ಪ್ರವೇಶಿಸುವ ಸಾಲೆತ್ತೂರು,ಅನೆಕಲ್ಲು, ಕನ್ಯಾನ, ಸಾರಡ್ಕ ಗಡಿಭಾಗದಲ್ಲಿ ತೀವ್ರ ಕಾರ್ಯಚರಣೆ ಮುಂದುವರಿದಿದೆ.

ಇದರ ಜೊತೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಹಿತ ಅನೇಕ ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಅಳವಡಿಸಿ ವಾಹನಗಳ ಮೇಲೆ ನಿಗಾ ಇರಿಸಿದ್ದು,ಎಲ್ಲಾ ವಾಹನಗಳ ತಪಾಸಣೆ ಕಾರ್ಯ ಆರಂಭವಾಗಿದೆ.

ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಇಂದಿನಿಂದಲೇ ವಾಹನಗಳ ತಪಾಸಣೆ ಕಾರ್ಯ ಆರಂಭವಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ .

More from the blog

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...