Friday, April 5, 2024

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ : ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

5ನೇ ತರಗತಿಗೆ ಮಾರ್ಚ್‌ 27ರಿಂದ 30ರವರೆಗೆ ನಾಲ್ಕು ದಿನಗಳು, 8ನೇ ತರಗತಿಗೆ ಮಾರ್ಚ್‌ 27ರಿಂದ ಏಪ್ರಿಲ್‌ 1ರವರೆಗೆ 6 ದಿನಗಳು ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಶಾಲೆಗಳನ್ನೇ ಮೌಲ್ಯಾಂಕನ ಕೇಂದ್ರಗಳಾಗಿ ಪರಿಗಣಿಸಿದೆ

5ನೇ ತರಗತಿ ವೇಳಾಪಟ್ಟಿ
27-03-2023: ಪ್ರಥಮ ಭಾಷೆ – ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲಗು, ತಮಿಳು.
28-03-2023: ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ.
29-03-2023: ಕೋರ್ ವಿಷಯ – ಪರಿಸರ ಅಧ್ಯಯನ.
30-03-2023:ಕೋರ್ ವಿಷಯ- ಗಣಿತ.

8ನೇ ತರಗತಿ ವೇಳಾಪಟ್ಟಿ
27-03-2023:ಕನ್ನಡ, ಇಂಗ್ಲಿಷ್, ಇಂಗ್ಲಿಷ್ (NCERT), ಹಿಂದಿ, ಉರ್ದು, ಮರಾಠಿ, ತೆಲಗು, ತಮಿಳು, ತೆಲುಗು, ಸಂಸ್ಕೃತ.
28-03-2023: ದ್ವಿತೀಯ ಭಾಷೆ- ಇಂಗ್ಲಿಷ್, ಕನ್ನಡ.
29-03-2023:ಹಿಂದಿ, ಹಿಂದಿ (NCERT), ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
30-03-2023:ಕೋರ್ ವಿಷಯ- ಗಣಿತ.
31-03-2023 :ಕೋರ್ ವಿಷಯ – ವಿಜ್ಞಾನ.
01-04-2023:ಕೋರ್ ವಿಷಯ ಸಮಾಜ ವಿಜ್ಞಾನ.

ಪ್ರತಿ ಪತ್ರಿಕೆಯು ತಲಾ 40 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಂದು ಅಂಕದ 20 ಬಹು ಆಯ್ಕೆಯ ಪ್ರಶ್ನೆಗಳು, 20 ಅಂಕಗಳಿಗೆ ವಿವರಣಾತ್ಮಕ ಉತ್ತರ ಬರೆಯುವ ಪ್ರಶ್ನೆಗಳಿರುತ್ತವೆ. ಅವುಗಳಲ್ಲಿ ಎರಡು ಅಂಕದ ಐದು ಪ್ರಶ್ನೆಗಳು, ಮೂರು ಅಂಕದ ಎರಡು ಪ್ರಶ್ನೆಗಳು, ನಾಲ್ಕು ಅಂಕದ ಒಂದು ಪ್ರಶ್ನೆಯನ್ನು ಪತ್ರಿಕೆಗಳು ಒಳಗೊಂಡಿರುತ್ತವೆ. ಉತ್ತರಿಸಲು ಎರಡು ಗಂಟೆ ಸಮಯ ನಿಗದಿ ಮಾಡಲಾಗಿದೆ.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...