Friday, April 5, 2024

ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ : ತಿಂಗಳ ವೇತನ ಎಷ್ಟು ಗೊತ್ತಾ…?

ಭಾರತೀಯ ಆಹಾರ ನಿಗಮದ (FCI) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 46 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಹಾಗೂ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (CE)- 26 ಹುದ್ದೆಗಳು
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- 20 ಹುದ್ದೆಗಳು

ಅರ್ಹತಾ ಮಾನದಂಡಗಳು:

  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (CE)- ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಎಂಜಿನಿಯರಿಂಗ್​/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 01/04/2023

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Deputy General Manager(Estt-I), Food Corporation of India, Headquarters, 16-20 Barakhamba Lane, New Delhi-110001

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...