Thursday, April 11, 2024

ಮನೆಗೆ ಬೆಂಕಿ : ಅಡುಗೆ ಕೋಣೆ, ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಮಾ. ೬ರ ತಡರಾತ್ರಿ ನಡೆದಿದೆ.

ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ೨ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಹೀಗಾಗಿ ಮನೆ ರಕ್ಷಿಸಲ್ಪಟ್ಟಿದೆ‌. ಘಟನೆಯಿಂದ ಯಾವುದೇ ಹಾನಿ ಉಂಟಾಗಿಲ್ಲ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...