Wednesday, April 17, 2024

ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಸರ್ಕಾರದಿಂದ ಆದೇಶ : ಮುಷ್ಕರ ವಾಪಸ್ ಪಡೆದ ನೌಕರರ ಸಂಘ

ಬೆಂಗಳೂರು: 7ನೇ ವೇತನ ಆಯೋಗ ಜಾರಿಗಾಗಿ ಸರ್ಕಾರಿ ನೌಕರರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ವಾಪಸ್​ ಪಡೆಯಲಾಗಿದೆ.

7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು. ಈ ಬೆನ್ನಲ್ಲೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್​.ಷಡಕ್ಷರಿ ಸುದ್ದಿಗೋಷ್ಠಿ ನಡೆಸಿ ಮುಷ್ಕರ ವಾಪಾಸ್ ಪಡೆದಿರುವುದಾಗಿ ಘೋಷಿಸಿದ್ದಾರೆ.

ಕಬ್ಬನ್​ ಪಾರ್ಕ್​ನಲ್ಲಿರುವ ಸಂಘದ ಕಚೇರಿಯಲ್ಲಿ ಸಿ.ಎಸ್​.ಷಡಕ್ಷರಿ ಸುದ್ದಿಗೋಷ್ಠಿ ನಡೆಸಿದ್ದಾರೆ.  ಸರ್ಕಾರ ಶೇಕಡಾ 17 ರಷ್ಟು ವೇತನ ಹೆಚ್ಚಳ ಮಾಡಿದೆ. ನಾವು 25 ರಷ್ಟು ಹೆಚ್ಚಳ ಕೇಳಿದ್ದೇವು. ಆದ್ರೆ ಸರ್ಕಾರ 17ರಷ್ಟು ಮಾಡಿದೆ. ಇದನ್ನು ನಾವು ಒಪ್ಪಿದ್ದೇವೆ. ಇದನ್ನು ನಾನು ಒಬ್ಬನೇ ತೀರ್ಮಾನ ತೆಗೆದುಕೊಂಡಿಲ್ಲ. ನಮ್ಮ ಸಂಘದವರೆಲ್ಲ ಸೇರಿ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದರು.

 

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...