Monday, April 15, 2024

ಪಿಲಾತಬೆಟ್ಟು ಗ್ರಾ.ಪಂ ವ್ಯಾಪ್ತಿಯ ತಹಶೀಲ್ದಾರ್‌ರಿಂದ ಗ್ರಾಮ ವಾಸ್ತವ್ಯ

ಬಂಟ್ವಾಳ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಎಂಬ ಕಾರ್ಯಕ್ರಮದನ್ವಯ ಬಂಟ್ವಾಳ ತಾಲೂಕು ತಹಶೀಲ್ದಾರರ ಗ್ರಾಮವಾಸ್ತವ್ಯ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಬಂಟ್ವಾಳ ತಹಶೀಲ್ದಾರ್ ಸತೀಶ ಕೂಡಲಿಗಿ ಅವರು ಮಾತನಾಡಿ, ಸರಕಾರದ ವತಿಯಿಂದ ಗ್ರಾಮೀಣ ಜನತೆಯ ಸಮಸ್ಯೆಗಳ ಬಗ್ಗೆ ಅರಿತು ಸ್ಥಳದಲ್ಲಿ ಪರಿಹಾರ ಕಲ್ಪಿಸಲು ಗ್ರಾಮ ಭೇಟಿ ಅಭಿಯಾನ ನಡೆಸಲಾಗುತ್ತಿದ್ದು, ಗ್ರಾಮಸ್ಥರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರಕಾರ ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ. ಪಿಲಾತಬೆಟ್ಟು ಗ್ರಾಮಸ್ಥರ ಹಲವಾರು ಸಮಸ್ಯೆಗಳಿಗೆ ಇಲ್ಲಿ ಕಾನೂನು ಚೌಕಟ್ಟಿನಲ್ಲಿ ಪರಿಹರಿಸಲು ಸಹಕಾರಿಯಾಗಿದೆ ಎಂದರು. ಗ್ರೇಡ್ ೨ ತಹಶೀಲ್ದಾರ್ ದಯಾನಂದ, ಗ್ರಾ.ಪಂ.ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ ಹೆಗ್ಡೆ, ಪಿಡಿಒ ಯಮುನಪ್ಪ ಕೊರವರ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ಪ್ರಮಾಣಪತ್ರ ವಿತರಿಸಲಾಯಿತು.

ತಾಲೂಕು ಆರೋಗ್ಯಾದಿಕಾರಿ ಡಾ. ಅಶೋಕ್ ರೈ, ಶಿಕ್ಷಣಾದಿಕಾರಿ ಜ್ಞಾನೇಶ್, ತಾಲೂಕಿನ ವಿವಿಧ ಇಲಾಖೆಗಳ ಇಲಾಖಾಧಿಕಾರಿಗಳು, ಗ್ರಾ.ಪಂ.ಸದಸ್ಯರು, ಸಿಬಂದಿ ವರ್ಗ, ಮತ್ತಿತರರು ಭಾಗವಹಿಸಿದ್ದರು.

ಕಂದಾಯ ನಿರೀಕ್ಷಕ ಜನಾರ್ದನ ಸ್ವಾಗತಿಸಿದರು. ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಹಶೀಲ್ದಾರ್ ಅವರು ಅಹವಾಲು ಸ್ವೀಕರಿಸಿದರು.

More from the blog

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...