Saturday, April 6, 2024

ನವ ಗುಳಿಗ ದೈವಗಳಿಗೆ ಕೋಲ ಸೇವೆ ನೀಡಿದ ಶಾಸಕ ಹರೀಶ್ ಪೂಂಜ

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ‌.

ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವಗುಳಿಗರಿಗೆ ಕೋಲ ನೀಡುವೆನೆಂದು ಶಾಸಕ ಹರೀಶ್ ಪೂಂಜಾ ಅವರು ಕಳೆದ ಚುನಾವಣಾ ಪೂರ್ವದಲ್ಲಿ ಹರಕೆ ಹೊತ್ತಿದ್ದರು‌. ಈ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಈ ಕೋಲ ಸೇವೆಯನ್ನು ನೋಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಕೋಲ ಸೇವೆಯನ್ನು ನೀಡಿದರು.

ತುಳುನಾಡಿನಲ್ಲಿ ನವಗುಳಿಗ ದೈವಗಳು ನೆಲೆಯಾದ ಏಕೈಕ ಕ್ಷೇತ್ರ ಬರ್ಕಜೆ. ಇಲ್ಲಿ ಹರಕೆ ಹೊತ್ತರೆ ಭಕ್ತರ ಮನಸಂಕಲ್ಪ ಈಡೇರುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಹರೀಶ್ ಪೂಂಜಾ ಅವರು ಇಲ್ಲಿ ಹರಕೆ ಹೊತ್ತಿದ್ದರು. ಇದೀಗ ನವಗುಳಿಗರಿಗೆ ಕೋಲ ನೀಡಿದ್ದಾರೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನವಗುಳಿಗ ದೈವಗಳ ಕೋಲ ಸೇವೆಯನ್ನು ಕಣ್ತುಂಬಿಕೊಂಡರು.

ಕ್ಷೇತ್ರಕ್ಕೆ ಅಗಮಿಸಿದ ಶಾಸಕ ಹರೀಶ್ ಪೂಂಜರನ್ನು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ಅವರು ಕ್ಷೇತ್ರದ ಪರವಾಗಿ ಗೌರವಿಸಿದ್ರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...