Wednesday, April 17, 2024

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ದೆಹಲಿ, ರಾಷ್ಟ್ರೀಯ ಮಹಿಳಾ ಆಯೋಗ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ (ರಿ.) ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಬಿ.ಸಿ. ರೋಡ್ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ಹಾಗೂ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜೆ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾಗ್ಯಮ್ಮ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಬಂಟ್ವಾಳ, ಹಾಗೂ ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ. ಚಂದ್ರಶೇಖರ ವೈ. ತಳವಾರ, ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಬಂಟ್ವಾಳ ಹಾಗೂ ಸದಸ್ಯ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ. ಕೃಷ್ಣಮೂರ್ತಿ ಎನ್ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಬಂಟ್ವಾಳ. ಮೋಹನ್‌ ಪ್ರಭು ಕೆ, ಉಪಾಧ್ಯಕ್ಷರು, ವಕೀಲರ ಸಂಘ (ರಿ) ಬಂಟ್ವಾಳ. ಹರಿಣಿ ಕುಮಾರಿ, ಡಿ, ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ. ಸರಸ್ವತಿ, ಸಹಾಯಕ ಸರ್ಕಾರಿ ಅಭಿಯೋಜಕರು. ಪುಷ್ಪರಾಜ್ ಹೆಗ್ಡೆ, ಅಧ್ಯಕ್ಷರು, ರೋಟರಿ ಕ್ಲಬ್‌ ಬಂಟ್ವಾಳ ಭಾಗವಹಿಸಿದ್ದರು.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...