Friday, April 5, 2024

ಮಾ.18-19ರಂದು ಮುಹಿಯುದ್ದೀನ್ ಜುಮಾ ಮಸೀದಿ ಮೂಲರಪಟ್ಟ ನವೀಕೃತ ಮಸೀದಿಯ ಉದ್ಘಾಟನೆ ಹಾಗೂ ಧಾರ್ಮಿಕ ಮತ ಪ್ರಭಾಷನ ಕಾರ್ಯಕ್ರಮ

ಮುಹಿಯುದ್ದೀನ್ ಜುಮಾ ಮಸೀದಿ ಮೂಲರಪಟ್ಟ ಮಾರ್ಚ್ 18 ಮತ್ತು 19ರಂದು ನವೀಕೃತ ಮಸೀದಿಯ ಉದ್ಘಾಟನೆ ಸೈಯ್ಯದ್ ಮೊಹಮ್ಮದ್ ಜಿಫ್ರಿ ಮುತ್ತುಕೋಯ ತಂಜಲ್ ಅವರ ನೇತ್ರತ್ವದಲ್ಲಿ ನಡೆಯಲಿರುವುದು ಹಾಗೂ 2 ದಿವಸಗಳ ಧಾರ್ಮಿಕ ಮತ ಪ್ರಭಾಷನ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ, ಮೂಲರಪಟ್ಟ ವಠಾರದಲ್ಲಿ ಜರಗಲಿರುವುದು ಎಂದು ಮುಹಿಯುದ್ದೀನ್ ಜುಮಾ‌ ಮಸೀದಿ ಅಧ್ಯಕ್ಷ ಎಂ.ಬಿ.ಅಶ್ರಫ್ ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 800 ವರ್ಷಗಳ ಇತಿಹಾಸವಿರುವ ಪುರಾತನ ಮಸೀದಿ ಎರಡುವರೆ ಕೋಟಿ ವೆಚ್ಚದಲ್ಲಿ ನವೀಕೃತಗೊಂಡು ಉದ್ಘಾಟನೆ ನಡೆಯಲಿರುವುದು. ಜಮಾತ್ ಭಾಂದವರ ಹಾಗೂ ಸರ್ವ ಧರ್ಮೀಯರ ಸಹಕಾರದೊಂದಿಗೆ ಸುಸಜ್ಜಿತವಾದ ಮಸೀದಿ ನಿರ್ಮಾಣಗೊಂಡು ಮಸೀದಿ ಒಳಗಡ ವಿಶಿಷ್ಟ ಶೈಲಿಯ ಮರದ ಕೆತ್ತನೆಯೊಂದಿಗೆ ವಿಶಾಲವಾದ ಹವಾ ನಿಯಂತ್ರಿತ ಮಸೀದಿ ನಿರ್ಮಾಣಗೊಂಡಿದೆ.

ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಮಗ್ರಿಬ್ ನಮಾಝ್ ವರೆಗೆ ಮಹಿಳೆಯರಿಗೆ ಮುಹಿಯುದ್ದೀನ್ ಜುಮಾ ಮಸೀದಿ ನೋಡಲು ಮುಕ್ತ ಅವಕಾಶವಿರುತ್ತದೆ.

ಮಾರ್ಚ್ 21 ರಂದು ಮಗ್ರಿಬ್ ನಮಾಝ್ ನಂತರ ನೂರ್ ಎ ಅಜೇರ್ ವಳಿಯುದ್ದೀನ್ ಫೈಝೀ ರವರ ನೇತತ್ವದಲ್ಲಿ ನಡೆಯಲಿರುವುದು.

ಪತ್ರಿಕಾಗೋಷ್ಠಿಯಲ್ಲಿ ಶಿಹಾಬುದ್ದೀನ್,ಅಬ್ದುಲ್ ಹಕೀಂ, ಹಿದಾಯುತ್ತುಲ್ಲಾ,ಹಂಝು, ಮಹಮ್ಮದ್ ಸಾಲಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...