Sunday, April 14, 2024

ಶಾಸಕ ರಾಜೇಶ್ ನಾಯ್ಕ್ ಅನುದಾನದ ನೂತನ ಸಂಪರ್ಕ ರಸ್ತೆ ಹಾಗೂ ನಿಟಿಲಾಪುರ ಕ್ಷೇತ್ರದ ಮಹಾದ್ವಾರ ಲೋಕಾರ್ಪಣೆ

ಬಂಟ್ವಾಳ: ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ಶ್ರೀ ನಿಟಿಲಾಕ್ಷ ದೇವಸ್ಥಾನ ಸಂಪರ್ಕಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ೧.೬೭ ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸಂಪರ್ಕ ರಸ್ತೆ ಹಾಗೂ ಗೋಳ್ತಮಜಲು ಗ್ರಾಮದ ಶಿವಶಕ್ತಿ ಬ್ರದರ್ಸ್ ನಿಟಿಲಾಪುರ ಟ್ರಸ್ಟ್ ವತಿಯಿಂದ ದಾನಿಗಳ ಸಹಕಾರದಿಂದ ನಿರ್ಮಾಣಗೊಂಡ ನಿಟಿಲಾಪುರ ಕ್ಷೇತ್ರದ ಮಹಾದ್ವಾರ ಲೋಕಾರ್ಪಣೆಗೊಂಡಿತು.‌

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ‌‌ ಅವರು ಕಾಂಕ್ರೀಟ್ ರಸ್ತೆ ಹಾಗೂ ದ್ವಾರವನ್ನು ಉದ್ಘಾಟಿಸಿದರು. ‌ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶುಭಹಾರೈಸಿದರು.‌

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಪ್ರಸ್ತಾವನೆಗೈದರು. ‌ಬಳಿಕ ದೇವಸ್ಥಾನದ ಆವರಣದಲ್ಲಿ ನಿರ್ಮಾಣಗೊಂಡ ಕಾಣಿಕೆ ಹುಂಡಿಯನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ನಿಟಿಲಾಪುರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ಪೂಜಾರಿ, ಪ್ರಮುಖರಾದ ಮೋನಪ್ಪ ದೇವಸ್ಯ, ಜಗನ್ನಾಥ ಕುಲಾಲ್, ದ್ವಾರ ನಿರ್ಮಾಣದ ಗುತ್ತಿಗೆದಾರ ಗೋಪಾಲ ನೆಲ್ಲಿ, ವ್ಯವಸ್ಥಪನಾ ಸಮಿತಿಯ ಸದಸ್ಯರು, ಗ್ರಾ.ಪಂ.ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

More from the blog

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...