Tuesday, April 16, 2024

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ

ಕಾರ್ಕಳ: ಕಷ್ಟ-ಸುಖಗಳು ಪ್ರತಿಯೊಬ್ಬರ ಬದುಕಿನಲ್ಲಿ ಸುಳಿಯದೇ ಇರಲಾರದು. ಪರೋಪಕಾರಿಯಾಗಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಗುಣ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಕೈಲಾದ ಸೇವೆ ಮಾಡುವುದರಿಂದ ತೃಪ್ತಿ ದೊರಕುವುದು ಎಂದು ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪವನ್ ಪೆರುಮುಂಡ ಹೇಳಿದರು.

ಕಾರ್ಕಳದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಮೊದಲ ಕಾರ್ಯಕ್ರಮದ ಅಂಗವಾಗಿ ಕಾರ್ಕಳದ ಜರಿಗುಡ್ಡೆ ಸುರಕ್ಷಾ ಸೇವಾಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಿಸಿ ಮಾತನಾಡಿದರು.

ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಮಾತನಾಡಿ, ಸೇವೆ ಮಾಡುವುದಕ್ಕೆ ಮುಖ್ಯವಾಗಿ ಬೇಕಾಗುವುದು ಮನಸ್ಸು. ಪ್ರತಿಯೊಬ್ಬರು ಕೈಲಾದ ಸಹಾಯ ಮಾಡಿ ಪರರ ನೋವಿಗೆ ಸ್ಪಂದಿಸುವ ಕಾರ್ಯ ನಡೆಸಬೇಕು.. ನಿಸ್ವಾಾರ್ಥ ಸೇವೆ ಮಾಡುವ ಮನೋಭಾವವಿದ್ದರೆ ಯಾವ ರೀತಿಯಲ್ಲೂ ಸೇವೆ ಮಾಡಬಹುದು ಎನ್ನುವುದಕ್ಕೆ ಅನಾಥಶ್ರಮದ ಮೂಲಕ ನೊಂದ ಜೀವಗಳಿಗೆ ಆಸರೆಯಾಗಿರುವ ಅಯಿಶಾರವರೇ ಸಾಕ್ಷಿ ಎಂದು ಹೇಳಿದರು.

ಸುರಕ್ಷಾ ಆಶ್ರಮದ ಅಯಿಶಾ ಸ್ವಾಾಗತಿಸಿದರು. ಟ್ರಸ್ಟಿಗಳಾದ ಅರ್ಚನಾ ಶೆಟ್ಟಿ, ದಿನೇಶ್ ಆಚಾರ್ಯ, ಅಕ್ಷತ್, ರಮಾನಂದ ಅಜೆಕಾರ್, ಶ್ವೇತಾ ಜೈನ್, ಮಂಜೇಶ್, ಅವಿಲ್ ರೆಂಜಾಳ ಉಪಸ್ಥಿತರಿದ್ದರು..

ಸುಮಾರು 11 ಸಾವಿರಷ್ಟು ಮೊತ್ತದ ಆಹಾರ ಸಾಮಗ್ರಿ, ಹಣ್ಣು ಹಾಗೂ ನಗದು ಹಸ್ತಾಂತರಿಸಲಾಯಿತು.

More from the blog

ಮಾಜಿ ಸಿ.ಎಂ.ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು...

ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ಸಾವು

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಮೃತ್ಯು. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...