Saturday, April 13, 2024

ಕೆಪಿಎಸ್​ಸಿಯಲ್ಲಿ ನೇಮಕಾತಿ : ಸ್ನಾತಕೋತ್ತರ ಪದವೀಧರರೇ ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗವು ಸಹಕಾರ ಸಂಘಗಳ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್ http://kpscrecruitment.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC )

ಹುದ್ದೆಗಳ ಸಂಖ್ಯೆ: 53

ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ಸಹಕಾರ ಸಂಘಗಳ ಇನ್ಸ್‌ಪೆಕ್ಟರ್ (HK)

ಅರ್ಹತಾ ಮಾನದಂಡಗಳು:

ಶೈಕ್ಷಣಿಕ ಅರ್ಹತೆ:

KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ ವಿಜ್ಞಾನ, ಮಾರ್ಕೆಟಿಂಗ್ ಮತ್ತು ಸಹಕಾರ, ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:

SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು

Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷಗಳು

PH/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

SC/ST/Cat-I ಮತ್ತು PH ಅಭ್ಯರ್ಥಿಗಳಿಗೆ: ರೂ.35/-

ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.85/-

Cat-2A/2B/3A & 3B ಅಭ್ಯರ್ಥಿಗಳಿಗೆ: ರೂ.335/-

ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.635/-

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 27650 ರಿಂದ 52650/- ರೂ. ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 2, 2023

ಅರ್ಜಿ ಸಲ್ಲಿಸುವುದು ಹೇಗೆ…?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...