Sunday, April 7, 2024

ಕೆ.ಪಿ.ಟಿ.ಸಿ.ಎಲ್, ಎಸ್ಕಾಂ ಸಿಬ್ಬಂದಿಗೆ ಗುಡ್ ನ್ಯೂಸ್ ; ವೇತನ ಹೆಚ್ಚಿಸಿ ಆದೇಶ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿಗಳ ವೇತನವನ್ನು ಶೇ.20ರಷ್ಟು ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ.

ವೇತನವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದಾದ್ಯಂತ ಎಲ್ಲಾ ನೌಕರರು ಗೈರಾರಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಶೇ 22ರಷ್ಟು ಹೆಚ್ಚಿಸುವ ಸಲುವಾಗಿ ಗುರುವಾರದಂದು ಪ್ರತಿಭಟನೆ ಮಾಡಲು ನಿರ್ಧಿರಿಸಿದ್ದರು. ಆದರೆ ನಿನ್ನೆ ಎಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂಧನ ಸಚಿವ ವಿ ಸುನಿಲ್ ಕುಮಾರ್ 2022ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ವೇತನವನ್ನು ಹೆಚ್ಚಿಸಲು ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಅದರಂತೆಯೇ ಇಂದು ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...