Sunday, April 14, 2024

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಿಜೃಂಭಣೆಯ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.

ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ ಬಂಗಾರು ಅರಸರು ಉದ್ಘಾಟಿಸಿದರು.

ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ವಿಟ್ಲದಿಂದ ಕುದ್ದುಪದವು- ಪೆರುವಾಯಿ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದು, ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯಾಗಿ ಕೀಲು ಕುದುರೆ, ಸಿಂಗಾರಿ ಮೇಳದೊಂದಿಗೆ ಕುಣಿತ ಭಜನೆ ಗಮನ ಸೆಳೆಯಿತು.

 

ಶ್ರೀ ಕ್ಷೇತ್ರದ ಶ್ರೀಕೃಷ್ಣ ಗುರೂಜಿ ಅವರೊಂದಿಗೆ ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ, ಬಾಯಾರು ಚಿತ್ರಮೂಲ ಮಠದ ಶ್ರೀ ಉಮೇಶ್ವರ ಕಾಳಿ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಪ್ರಮುಖ ಉಪ ಸಮಿತಿಗಳ ಪದಾಧಿಕಾರಿಗಳು, ಸಂಘಸಂಸ್ಥೆಗಳ ಕಾರ್ಯಕರ್ತರು, ಸೇವಾ ಸಮಿತಿಗಳ ಕಾರ್ಯಕರ್ತರು, ಮಹಿಳಾ ಸಮಿತಿ ಸದಸ್ಯರು, ಊರ ಪರವೂರ ಭಕ್ತಾದಿಗಳು ಭಾಗವಹಿಸಿದ್ದರು.

More from the blog

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...