Friday, April 12, 2024

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರ: ಧಾರ್ಮಿಕ ಸಭೆ

ವಿಟ್ಲ: ಬ್ರಹ್ಮಕಲಶದೊಂದಿಗೆ ಭಕ್ತರ ಮನಸ್ಸು ಶುದ್ಧವಾಗುತ್ತದೆ. ನಮ್ಮ ಅಂತರಂಗವನ್ನು‌ ಶುದ್ಧಿ ಕರಿಸುವ ಕೆಲಸ ಕ್ಷೇತ್ರದಿಂದ ಆಗುತ್ತದೆ. ಧಾರ್ಮಿಕ ಭಾವನೆ ಜಾಗೃತವಾಗಬೇಕು. ಲಕ್ಷದೊಂದಿಗೆ ನಮ್ಮ ದೇವರ ಆರಾಧನೆ ಅಗತ್ಯ. ಜ್ಞಾನದ ಬೆಳಕನ್ನು ನೀಡುವ ಕೆಲಸ ಶ್ರೀಕೃಷ್ಣ ಗುರೂಜಿಯವರಿಂದ ಆಗುತ್ತಿದೆ ಎಂದು ಉಪ್ಪಳ ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ನುಡಿದರು.

ಅವರು ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಮಾ.೯ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು‌.

ರಾಮನಗರ ಸೋಲೂರು ಆರ್ಯ ಈಡಿಗ ಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿರವರು ಆಶೀರ್ವಚನ ನೀಡಿ ಭಜನೆಯ ಶಕ್ತಿ ಅಪಾರ. ಪುಣ್ಯ ಕ್ಷೇತ್ರಗಳ ಬಗ್ಗೆ ಭಕ್ತಿ ಅಗತ್ಯ. ಧೈರ್ಯದಿಂದ ಬದುಕುವ ಮನಸ್ಸು ನಮ್ಮದಾಗಬೇಕು. ವೈದಿಕ ಪರಂಪರೆಯ ಪಾಲನೆ ಅಗತ್ಯ ಎಂದರು.

ನಿಪ್ಪಾಣಿಯ ಶ್ರೀ ಅರುಣಾನಂದ ಸ್ವಾಮೀಜಿರವರು ಆಶೀರ್ವಚನ ನೀಡಿ ಮನುಷತ್ವ ನಮ್ಮಲ್ಲಿರಬೇಕು. ದೈವಾನುಗ್ರಹವಿದ್ದರೆ ಎಲ್ಲವೂ ಪ್ರಾಪ್ತಿಯಾಗಲು ಸಾಧ್ಯ. ಭಕ್ತಿಯ ಪರಾಕಾಷ್ಠೆ ನಮ್ಮಲ್ಲಿರಬೇಕು. ನಮ್ಮೊಳಗಿನ ಜ್ಞಾನ ವೃದ್ಧಿಯಾಗಬೇಕು. ಭಕ್ತಿಯ ಮೂಲಕ ಸಂಚರಿಸಿದರೆ ಎಲ್ಲವನ್ನು ಗೆಲ್ಲಬಹುದು. ಪಂಚ ಯಜ್ಞದೊಂದಿಗೆ ಜೀವನ ಸಾರ್ಥಕ್ಯ ಮಾಡುವ ಮನಸ್ಸು ನಮ್ಮದಾಗಬೇಕು. ನಮ್ಮ ಸಂಸ್ಕೃತಿ – ಸಂಸ್ಕಾರವನ್ನು ಮರೆಯುತ್ತಿದ್ದೇವೆ. ಪ್ರಕೃತಿ ಚಂತನೆ ನಮ್ಮಲ್ಲಿರಬೇಕು. ಸಂಸ್ಕಾರ ನೀಡುವ ಕೆಲಸ ಇಂತಹ ಕ್ಷೇತ್ರದಿಂದ ಆಗಬೇಕಿದೆ ಎಂದರು.

ವಾಂತಿಚಾಲ್ ಶ್ರೀ ಮಂತ್ರಗುಳಿಗ ದೈವಸನ್ನಿಧಿಯ ಪ್ರಧಾನ ಕರ್ಮಿ ಗೋಪಾಲಕೃಷ್ಣ ವಾಂತಿಚಾಲ್ ರವರು ಧಾರ್ಮಿಕ ಉಪನ್ಯಾಸ ನೀಡಿದರು. ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಶ್ರೀಕೃಷ್ಣ ಗುರೂಜಿ,
ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷರಾದ ಹರೀಶ್ ಸಿ.ಹೆಚ್. , ಬಾಲಕೃಷ್ಣ ಕಾರಂತ ಎರುಂಬು, ಉಧ್ಯಮಿ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಶೇಖರ ಜೆ.ಎಸ್. ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ:
ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ಯಶೋಧರ ಬಂಗೇರ ಅಳಿಕೆ, ಭಜನಾ ಕ್ಷೇತ್ರದ ಸಾಧನೆಗೆ ನಾರಾಯಣ ಶೆಟ್ಟಿ ಉಕ್ಕುಡ, ಖ್ಯಾತ ಯಕ್ಷಗಾನ ಕಲಾವಿದ ಗುಡ್ಡಪ್ಪ ಸುವರ್ಣ, ಕಲಾಕ್ಷೇತ್ರದ ಸಾಧನೆಗಾಗಿ ಗಣೇಶ್ ಆಚಾರ್ಯ ಕೊಂದಲಕೋಡಿ ಹಾಗೂ ಚಂದ್ರಶೇಖರ ಕುಕ್ಕಾಜೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಶ್ರಾವಣ್ ಉಳ್ಳಾಲ ಹಾಗೂ ಭರತನಾಟ್ಯ ಗುರು ಕಿರಣ್ ಉಳ್ಳಾಲ್ ರವರನ್ನು ಸನ್ಮಾನಿಸಲಾಯಿತು. ಪೆರುವಾಯಿ ಹಾಗೂ ಮಾಣಿಲ ಗ್ರಾಮದ ಆಶಾ ಕಾರ್ತೆಯರಾದ ರೇವತಿ ಪೆರುವಾಯಿ, ಸುರೇಖ ಎಸ್., ವನಮಾಲ ಓಣಿಬಾಗಿಲು, ಬೇಬಿ ಪೆರುವಾಯಿ, ರತ್ನಾವತಿ ತಾರಿದಳ, ಜಾನಕಿ ಕಕ್ವೆ ರವರನ್ನು ಗೌರವಿಸಲಾಯಿತು. ಸುಶ್ಮಿತಾ ಕೆ., ಸ್ವಾತಿ, ಸುಕನ್ಯ, ಕಾವ್ಯ ಶ್ರೀ, ದೀಕ್ಷ, ಶ್ರೀಜರವರು ಸನ್ಮಾನ ಪತ್ರ ವಾಚಿಸಿದರು.

ಸುಕನ್ಯ, ಕಾವ್ಯಶ್ರೀ ಪ್ರಾರ್ಥಿಸಿದರು.
ಕ್ಷೇತ್ರದ ಬ್ರಹ್ಮಕಲಶೋತ್ಸವದ ಅಧ್ಯಕ್ಷ ಡಾ| ಗೀತಪ್ರಕಾಶ್ ಸ್ವಾಗತಿಸಿದರು. ಕುಕ್ಕಾಜೆ ಕಾಳಿಕಾ ಮಹಿಳಾ ಸಮಿತಿಯ ಅಧ್ಯಕ್ಷರಾದ ಅನುರಾಧ ಪಳನೀರು ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...