Wednesday, April 17, 2024

ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದ ಎಂಟನೇ ತರಗತಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ 2022-23ನೇ ಸಾಲಿನ ಎಂಟನೇ ತರಗತಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮುಖ್ಯ ಶಿಕ್ಷಕ ಶ್ರೀಯುತ ನಾರಾಯಣ ಪೂಜಾರಿ ಎಸ್ ಕೆ, ಪ್ರಾರ್ಥಮಿಕ ಹಂತದಲ್ಲಿ ಪಡೆದಂತ ಶಿಕ್ಷಣವು ಮಕ್ಕಳ ಮುಂದಿನ ಭವಿಷ್ಯಕ್ಕೆ ಭವ್ಯ ಬುನಾದಿ ಆಗಿದೆ. ಮಜಿ ಶಾಲೆಯಲ್ಲಿ ಪಡೆದಂತ ಸಂಸ್ಕಾರಯುಕ್ತ ಶಿಕ್ಷಣವನ್ನು ಮುಂದುವರಿಸಿ ಬೇರೆ ಶಾಲೆಯಲ್ಲಿ ಕೂಡ ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಿ ನೀವು ಇಷ್ಟ ಪಟ್ಟ ಕ್ಷೇತ್ರಗಳಲ್ಲಿ ಉತ್ತಮ ವ್ಯಕ್ತಿಗಳಾಗಿ ಪ್ರಾಥಮಿಕ ಶಿಕ್ಷಣ ಪಡೆದ ಈ ಶಾಲೆಗೂ ಹಾಗೂ ಊರಿಗೆ ಕೀರ್ತಿ ತನ್ನಿ ಎಂದು ಎಂಟನೇ ತರಗತಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶುಭ ಹಾರೈಸಿದರು.

ಹಿರಿಯ ಶಿಕ್ಷಕಿ ಶಕುಂತಳ ಎಂ ಬಿ ಮಕ್ಕಳಿಗೆ ಶುಭ ಹಾರೈಸಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಒಂದು ಶಾಲೆಯನ್ನು ಬಿಟ್ಟು ಇನ್ನೊಂದು ಶಾಲೆಗೆ ಮಕ್ಕಳು ಹೋಗುವುದು ಅನಿವಾರ್ಯ, ಈ ಶಾಲೆಯಿಂದ ಬಿಳ್ಕೊಡುತ್ತಿರುವ ಮಕ್ಕಳನ್ನು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಎಲ್ಲಾ ಶಿಕ್ಷಕರು ತಮ್ಮ ಸ್ವಂತ ಮಕ್ಕಳಂತೆ ತಿದ್ದಿ ಬುದ್ದಿ ಹೇಳಿ ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸಿದ್ದೇವೆ, ಮುಂದೆ ನೀವು ಸೇರಿದ ಶಾಲೆಗಳಲ್ಲಿಯೂ ಅಲ್ಲಿನ ಶಿಕ್ಷಕರಿಗೆ ಆದರ್ಶ ವಿದ್ಯಾರ್ಥಿಗಳಾಗಿ ಎಂದು ಶುಭ ಹಾರೈಸಿದರು.

ಎಂಟನೇ ತರಗತಿ ವಿದ್ಯಾರ್ಥಿ ಕುಮಾರಿ ಮಾನಸ ತನ್ನ ಶಾಲಾ ಶಿಕ್ಷಕರ ಬಗ್ಗೆ ಸ್ವಂತ ಕವನ ಬರೆದು ವಾಚಿಸಿದಳು ಇದು ಎಲ್ಲರ ಗಮನ ಸೆಳೆಯಿತು, ಬೀಳ್ಕೊಳ್ಳುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಮಜಿ ಶಾಲೆಯಲ್ಲಿ ಪಡೆದ ಅನುಭವವದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು.

ಶಾಲಾ ಮಕ್ಕಳು ವಿದಾಯ ಗೀತೆ ಹಾಡಿದರು. ಬಿಳ್ಕೊಳ್ಳುತ್ತಿರುವ ಎಂಟನೇ ತರಗತಿ ವಿದ್ಯಾರ್ಥಿಗಳು ತಮ್ಮ ಸವಿನೆನಪಿಗಾಗಿ ಶಾಲಾ ಕಚೇರಿಗೆ ಎರಡು ಕಚೇರಿ ಚಯರ್ ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿ ಸಿಸಿಲಿಯ, ಶಿಕ್ಷಕಿರಾದ ಸಂಗೀತ ಶರ್ಮಾ, ಅನುಷಾ, ಮುರ್ಷಿದ ಬಾನು, ಅತಿಥಿ ಶಿಕ್ಷಕಿಯರಾದ ಮೀನಾಕ್ಷಿ, ಪ್ರೇಮಲತಾ, ಹರಿಣಾಕ್ಷಿ, ಕೆ ಜಿ ಶಿಕ್ಷಕಿಯರಾದ ಜಯಲಕ್ಷ್ಮಿ, ಜಯಚಿತ್ರ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಎಲ್ಲಾ ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿಗಳು ಭಾಗವಹಿಸಿದರು.

ವಿದ್ಯಾರ್ಥಿನಿ ಗಳಾದ ಧನ್ವಿಲಕ್ಷ್ಮಿ ಸ್ವಾಗತಿಸಿ, ದೀಕ್ಷಾ ವಂದಿಸಿ ಧನ್ವಿತ ಕಾರ್ಯಕ್ರಮ ನಿರೂಪಿಸಿದಳು.

More from the blog

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...