Friday, April 5, 2024

ಮಾಸಿಕ ವೇತನ 1,42,400 ರೂ.; ಹುದ್ದೆಯ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

ರೈಲ್ವೆ ಸಚಿವಾಲಯವು ಡೆಪ್ಯುಟೇಶನ್ ಆಧಾರದ ಮೇಲೆ 12 ಸಹಾಯಕ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ರೈಲ್ವೆ ಸಚಿವಾಲಯದ ನೇಮಕಾತಿ 2023 ರ ಅಧಿಕೃತ ಅಧಿಸೂಚನೆಯ ಅನುಸಾರವಾಗಿ, ಆಯ್ಕೆಯಾದ ಅಭ್ಯರ್ಥಿಗೆ 44900 ರಿಂದ 142400 ರೂ.ಗಳ ನಡುವೆ ಮಾಸಿಕ ಸಂಭಾವನೆ ನೀಡಲಾಗುತ್ತದೆ. ರೈಲ್ವೇ ನೇಮಕಾತಿ 2023 ರ ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ, ಪೋಸ್ಟಿಂಗ್ ಸ್ಥಳವು ಹೊಸ ದೆಹಲಿ ಆಗಿರುತ್ತದೆ. ಅರ್ಜಿ ಸಲ್ಲಿಸ ವಯೋಮಿತಿ 56 ವರ್ಷ.

ಅಧಿಕಾರಾವಧಿ– ನೇಮಕಾತಿಯು ಆರಂಭದಲ್ಲಿ 3 ವರ್ಷಗಳ ಅವಧಿಗೆ ಇರುತ್ತದೆ.

ಸಹಾಯಕ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಯನ್ನು ಹೊಂದಿರಬೇಕು.

  • 1- ಪೋಷಕ ಕೇಡರ್ ಅಥವಾ ಇಲಾಖೆಯಲ್ಲಿ ನಿಯಮಿತ ಆಧಾರದ ಮೇಲೆ ಹುದ್ದೆಗಳನ್ನು ಹೊಂದಿರುವುದು; ಅಥವಾ ಪೇ ಮ್ಯಾಟ್ರಿಕ್ಸ್‌ನಲ್ಲಿ (ರೂ.35400-112400) ಮಟ್ಟ-6 ರಲ್ಲಿ 05 ವರ್ಷಗಳ ಸೇವೆಯೊಂದಿಗೆ ಅಥವಾ ಇದಕ್ಕೆ ಸಮವಾದ, ಪೋಷಕ ವರ್ಗ ಅಥವಾ ಇಲಾಖೆಯಲ್ಲಿ ನಿಯಮಿತ ಆಧಾರದ ಮೇಲೆ ನೇಮಕಾತಿ ಹೊಂದಿರಬೇಕು.
  • ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಂಪ್ಯೂಟರ್ ಅಪ್ಲಿಕೇಶನ್‌ಗಳು ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವುದು: ಅಥವಾಮಾಹಿತಿ ತಂತ್ರಜ್ಞಾನದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ B.E/B.Tech (ಕಂಪ್ಯೂಟರ್ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಕಂಪ್ಯೂಟರ್ ಟೆಕ್ನಾಲಜಿ ಅಥವಾ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) ಪದವಿ ಪಡೆದಿರಬೇಕು

ಅರ್ಜಿ ಸಲ್ಲಿಸುವುದು ಹೇಗೆ…?

ರೈಲ್ವೆ ಸಚಿವಾಲಯದ ನೇಮಕಾತಿ 2023 ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ Deputy Secretary, Room No. 110-C Rail Bhawan, Raisina Road, New Delhi-110001 ವಿಳಾಸಕ್ಕೆ ಅಧಿಸೂಚನೆ ಪ್ರಕಟವಾದ 60 ದಿನಗಳ ಒಳಗೆ ಕಲಿಸತಕ್ಕದ್ದು.ಅಧಿಕೃತ ಅಧಿಸೂಚನೆಯನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...