Sunday, April 7, 2024

ಅಕ್ರಮ ಸಾಗಾಟದ ಮರಳು ಸಾಗಾಟದ ವಾಹನಗಳ ಮೇಲೆ ದಾಳಿ : ಟನ್ ಗಟ್ಟಲೆ ಮರಳು ವಶಕ್ಕೆ

ಮಂಗಳೂರು: ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ವಹಿಸಿರುವ ಪೊಲೀಸ್ ಇಲಾಖೆ ನಗರದ ವಿವಿಧೆಡೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳು ಲಾರಿಯ ಮೇಲೆ ದಾಳಿ ನಡೆಸಿ 30-40 ಟನ್ ನಷ್ಟು ಮರಳನ್ನು ವಶಪಡಿಸಿಕೊಂಡಿದೆ‌.

ಫೆಬ್ರವರಿ 25ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂ. ಆರ್. ಪಿ.ಎಲ್. ಮೇಲ್ಸೇತುವೆ ಬಳಿ ಸುಮಾರು ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ 2 ಲಾರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು 10ಟನ್ ಮರಳನ್ನು ವಶಪಡಿಸಿಕೊಂಡಿದೆ. ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕರಿಗೆ ಮರಳನ್ನು ಹಸ್ತಾಂತರಿಸಲಾಗಿದೆ.

ಫೆಬ್ರವರಿ 26ರಂದು ಪಣಂಬೂರು ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ರಸ್ತೆಯಲ್ಲಿ ಸುಮಾರು 12-15 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಲಾರಿಗಳನ್ನು ಪಣಂಬೂರು ಠಾಣೆಯ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮಕ್ಕಾಗಿ ಈ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ.

ಫೆಬ್ರವರಿ 28ರಂದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಡಂ ಕುದ್ರು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟದ ಟಿಪ್ಪರ್ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 2 ಯುನಿಟ್ ನಷ್ಟು ಮರಳನ್ನು ವಶಕ್ಕೆ ತೆಗೆದುಕೊಂಡಿದೆ. ಅಲ್ಲದೆ ಖಾಲಿ ಟಿಪ್ಪರ್ ಲಾರಿಯನ್ನು ಕಂಕನಾಡಿ ಠಾಣೆಯ ಠಾಣಾಧಿಕಾರಿಯವರು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಿಗೆ ಹಸ್ತಾಂತರಿಸಲಾಗಿರುತ್ತದೆ.

ಮಾರ್ಚ್ 1ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಹಾಗೂ ಸಿಬಂದಿ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿರುವ ಸುಮಾರು 10 ಲೋಡ್ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ನಾಲ್ಕೂ ಪ್ರಕರಣಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...