Friday, April 12, 2024

ಮಂಗಳೂರು ಕುಕ್ಕರ್ ಬ್ಲಾಸ್ಟ್ ಹೊಣೆ ಹೊತ್ತ ಉಗ್ರ ಸಂಘಟನೆ

ಮಂಗಳೂರು ಆಟೋ ರಿಕ್ಷಾ ಕುಕ್ಕರ್ ಸ್ಫೋಟದ ಹೊಣೆಯನ್ನ ISKP ಉಗ್ರ ಸಂಘಟನೆ ಹೊತ್ತುಕೊಂಡಿದೆ.

2022ರ ಅಕ್ಟೋಬರ್ 23ರಂದು ಕೊಯಮತ್ತೂರಿನ ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಅದಾದ ಬಳಿಕ ನವೆಂಬರ್ 19, 2022ರಂದು ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಸಂಭವಿಸಿತ್ತು. ಕೊಯಮತ್ತೂರು, ಮಂಗಳೂರು ಈ ಬ್ಲಾಸ್ಟ್‌ನಲ್ಲೂ ನಮ್ಮದೇ ಕೈವಾಡವಿದೆ. ನಮ್ಮವರು ನಮ್ಮ ಧರ್ಮದ ಗೌರವಕಕ್ಕಾಗಿ ಸೇಡು ತೀರಿಸಿಕೊಂಡರು ಎಂದು ಇಸ್ಲಾಮಿಕ್ ಸ್ಟೇಟ್ ಖೊರಸಾನ್ ಪ್ರಾವಿನ್ಸ್‌ ಉಗ್ರ ಸಂಘಟನೆ ಪ್ರಕಟಿಸಿಕೊಂಡಿದೆ.

ಇಸ್ಲಾಮಿಕ್ ಸ್ಟೇಟ್ ಖೊರಸಾನ್ ಪ್ರಾವಿನ್ಸ್‌ ಉಗ್ರ ಸಂಘಟನೆ ಇಂತಹದೊಂದು ಪ್ರಕಟಣೆ ಹೊರಡಿಸಿದೆ. ತನ್ನ ಮುಖವಾಣಿ ವಾಯ್ಸ್ ಆಫ್ ಖುರಸಾನ್ ಮ್ಯಾಗಝೀನ್‌ನಲ್ಲಿ ಈ ರೀತಿ ಉಲ್ಲೇಖ ಮಾಡಲಾಗಿದೆ ಎಂದು ಇಂಡಿಯಾ ಟುಡೇ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...