Thursday, April 11, 2024

ಉಗ್ರ ಕೃತ್ಯಕ್ಕೆ ವಿದೇಶದಿಂದ ಹಣ ಪೂರೈಕೆ : ಬಂಧಿತ ಬಂಟ್ವಾಳ, ಪುತ್ತೂರಿನ ಐವರ ತೀವ್ರ ವಿಚಾರಣೆ

ಬಂಟ್ವಾಳ: ಭಯೋತ್ಪಾದನ ಚಟುವಟಿಕೆಗೆ ಹಣ ವರ್ಗಾಯಿಸಿದ ಆರೋಪದಲ್ಲಿ ಬಿಹಾರದ ಪಟ್ನಾದ ಪುಲ್ವಾರಿ ಶರೀಫ್‌ನಲ್ಲಿ ಬಂಧಿತರಾಗಿರುವ ಪುತ್ತೂರು ಹಾಗೂ ಬಂಟ್ವಾಳದ ಐವರಿಗೆ ವಿದೇಶದಿಂದ ಹಣ ಪೂರೈಕೆ ಆಗಿರುವ ಅಂಶ ಎನ್‌ಐಎ ತನಿಖೆಯಲ್ಲಿ ಬಹಿರಂಗಗೊಂಡಿದ್ದು, ಬಂಧಿತರನ್ನು ಪಟ್ನಾದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದೇಶಾದ್ಯಂತ ಭಯೋತ್ಪಾದನ ಕೃತ್ಯಕ್ಕೆ ವಿದೇಶದಿಂದ ಹಣ ಪೂರೈಕೆ ಆಗುತ್ತಿದ್ದು, ಅದನ್ನು ಉಗ್ರ ಕೃತ್ಯಗಳಲ್ಲಿ ತೊಡಗುವವರಿಗೆ ನೀಡಲು ಬೇರೆ ಬೇರೆ ರಾಜ್ಯಗಳಲ್ಲಿ ತಂಡ ಕಾರ್ಯಾಚರಿಸುತ್ತಿರುವ ಅಂಶ ಆತಂಕ ಮೂಡಿದೆ. ಈಗಾಗಲೇ ಕೋಟ್ಯಂತರ ರೂ. ವರ್ಗಾಯಿಸಲಾಗಿದ್ದು, ಇದಕ್ಕಾಗಿ ಪಿಎಫ್‌ಐ ಸಹಿತ ಹಲವು ಸಂಘಟನೆ ಸದಸ್ಯರ ಖಾತೆಗಳನ್ನು ಬಳಸಿಕೊಳ್ಳಲಾಗಿದೆ. ಕೆಲವೆಡೆ ಸದಸ್ಯರಲ್ಲದವರ ಖಾತೆಯಿಂದಲೂ ಹಣ ವರ್ಗಾಯಿಸಲಾಗಿದೆ.

ಇಡೀ ದೇಶದಲ್ಲಿ ಈ ಜಾಲ ಹಬ್ಬಿದ್ದು, ಕರಾವಳಿಯೇ ಇದರ ಮೂಲವಾಗಿರುವ ಅಂಶ ಬೆಳಕಿಗೆ ಬಂದಿದೆ.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...