Saturday, April 6, 2024

ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ : ತಿಂಗಳ ವೇತನ 50 ಸಾವಿರ ರೂ. ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 9 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ( NIMHANS )
  • ಹುದ್ದೆಗಳ ಸಂಖ್ಯೆ: 3
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ

ಶೈಕ್ಷಣಿಕ ಅರ್ಹತೆ:

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ-ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ಸಹ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 50 ಸಾವಿರ ರೂ. ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇ-ಮೇಲ್ ಐಡಿ, [email protected] ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಪ್ರಮುಖ ದಿನಾಂಕ:

ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಏಪ್ರಿಲ್ 9, 2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...