Wednesday, April 17, 2024

ಕೃಷ್ಣ ಮಠಕ್ಕೆ ಮುಸ್ಲಿಂ ರಾಜರು ಜಾಗ ಕೊಟ್ಟ ಹೇಳಿಕೆ : ಪೇಜಾವರ ಶ್ರೀಗಳು ಏನಂದ್ರು..?

ತುಮಕೂರು: ಉಡುಪಿ ಕೃಷ್ಣ ಮಠದ ಜಾಗವನ್ನ ಮುಸ್ಲಿಂ ರಾಜರು ಕೊಟ್ಟಿದ್ದು ಎಂದು ಯುವ ಕಾಂಗ್ರೆಸ್​​​ ನಾಯಕ ಮಿಥುನ್ ರೈ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಉಡುಪಿ ಕೃಷ್ಣ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ʻನಮ್ಮೂರ ಮಸೀದಿ ನೋಡ ಬನ್ನಿʼ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್‌ ರೈ ಅವರು, ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂಬ ಹೇಳಿಕೆ ನೀಡಿದ್ದರು.

ಇದೀಗ ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು, ‘ಯಾರೇ, ಯಾವ ಹೇಳಿಕೆಯನ್ನ ಕೂಡ ಕೊಡಬಹುದು. ಆದ್ರೆ ಅಂತಹ ಹೇಳಿಕೆಯನ್ನ ಕೊಡಬೇಕು ಅಂತಾದ್ರೆ, ಅದಕ್ಕೆ ಸೂಕ್ತವಾದ ಆಧಾರವನ್ನ ಕೊಟ್ರೆ ಆ ಮಾತಿಗೆ ಬೆಲೆ ಇರುತ್ತೆ. ಆಧಾರ ರಹಿತವಾಗಿ ಏನು ಬೇಕಾದ್ರೂ ಹೇಳಬಹುದು. ಹೇಳಿಕೆ ಕೊಟ್ಟವರನ್ನ ಯಾಕೆ ಕೊಟ್ಟಿದ್ದೀರಿ ಅಂತಾ ಕೇಳ್ಬೇಕು. ಆಧಾರ ರಹಿತವಾದ ಮಾತನ್ನ ಇಟ್ಕೊಂಡು ಚರ್ಚೆ ಬೆಳೆಸ್ತಾರೆ ಅಂತಾದ್ರೆ ಅದಕ್ಕೆ ಅರ್ಥವಿಲ್ಲ’ ಎಂದು ಹೇಳಿದ್ದಾರೆ.

ಉಡುಪಿಯ ಅನಂತೇಶ್ವರ ಸನ್ನಿಧಾನ ಇರಬಹುದು, ಕೃಷ್ಣ ಮಠದ ಸನ್ನಿಧಾನ ಇರಬಹುದು ರಾಮಭೋಜ ಎಂಬ ಅರಸ ನೀಡಿರೋದಕ್ಕೆ ಆಧಾರಗಳಿವೆ. ಹಾಗಿರುವಾಗ ಅದು ನಮಗೆ ಅದು ರಾಮಭೋಜ ಕೊಟ್ಟಿರುವಂತದ್ದು. ಗುರುಗಳ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಅದು ಇಲ್ಲಿ ಅಲ್ಲ, ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟ ಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡ್ತಿದ್ದ. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು.ಆದ್ರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿಹೇಳಿದರು. ಆಗ ಆಚಾರ್ಯರ ವ್ಯಕ್ತಿತ್ವವನ್ನ ಕಂಡು ಆ ರಾಜ ಅಲ್ಲಿನ ಅರ್ಧ ರಾಜ್ಯವನ್ನ ದಾನ ಮಾಡುತ್ತಾನೆ. ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು ಅಂತಾ ಹೇಳಿದ್ದಲ್ಲ ಎಂದು ಹೇಳಿದ್ದಾರೆ.

ಮಿಥುನ್​ ರೈ ಅವರು ಗೊಂದಲದಿಂದ ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಅನ್ನೋದು ನನ್ನ ಅನಿಸಿಕೆ ಎಂದು ಹೇಳಿದ್ದಾರೆ

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...