Monday, April 8, 2024

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ : ವಿಟ್ಲದ ಮಹಿಳೆ ಸಹಿತ ನಾಲ್ವರು ಅರೆಸ್ಟ್, ಮತ್ತೋರ್ವ ಎಸ್ಕೇಪ್

ಉಳ್ಳಾಲ: ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು, ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ

ಬಂಧಿತ ಆರೋಪಿ ಬಂಟ್ವಾಳದ ಬೋಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ ಎಂದು ಪೊಲೀಸರು ತಿಳಿಸಿದ್ದಾರೆ.

ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್. ಉಪ‌ನಿರೀಕ್ಷಕರಾದ ಮಂಜುಳಾ.ಎಲ್ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ.

ಲತೀಫ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತನ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಧಿತ ರುಕಿಯಾ ಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್‌ಗಳು, 5,000 ರೂ. ನಗದು ಸೇರಿ1,76,580 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ,ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...