Friday, April 5, 2024

ಕಾಂಗ್ರೆಸ್ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಬಂಟ್ವಾಳ ಪ್ರಜಾಧ್ವನಿಯಾತ್ರೆ ಮಾ.10ರಿಂದ ಆರಂಭ

ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು. ಒಂದೇ ದಿನ ಮೂರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ಯಾತ್ರೆಯನ್ನು ನಡೆಸಲಾಗುವುದು. ಪ್ರತಿ ದಿನ ಸಂಜೆ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭಗೊಳ್ಳಲಿದೆ. ಪ್ರಮುಖ ಮುಖಂಡರು ಪ್ರತಿದಿನದ ಯಾತ್ರೆಯಲ್ಲಿ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.

ಇನ್ನೊಬ್ಬರು ಮಾಡಿದ್ದನ್ನು ಹೇಳೋದಿಲ್ಲ:
ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ ಎಂದು ಹೇಳಿದ ರಮಾನಾಥ ರೈ, ಬಂಟ್ವಾಳದ ಒಳಚರಂಡಿ ಯೋಜನೆ ಮಂಜೂರಾತಿಯನ್ನು 2017ರ ಅಕ್ಟೋಬರ್ 10ರಂದು ನಾನು ಮಾಡಿಸಿದ್ದೇನೆ. ಇದಕ್ಕೆ ದಾಖಲಾತಿ ಇದೆ. ಆರು ವರ್ಷಗಳಾದರೂ ಕೆಲಸವಾಗಿಲ್ಲ ಎಂದು ಹೇಳಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತನ್ನ ಅವಧಿಯಲ್ಲಿ ಆಗಿದ್ದು ಎಂದು ನೆನಪಿಸಿದ ಅವರು, ಬಂಟ್ವಾಳ ತಾಲೂಕಿನ ಹೆಮ್ಮೆ ಎನಿಸಿದ ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಾಣಕ್ಕೆ ಎಂಟು ಕೋಟಿಗಳನ್ನು ಮಂಜೂರುಗೊಳಿಸಿ ಕೆಲಸ ಆರಂಭಿಸಲಾಗಿತ್ತು. ಇದುವರೆಗೂ ಈಗಿನ ಶಾಸಕರ ಅವಧಿಯಲ್ಲಿ ಮುಗಿಸಿಲ್ಲ ಎಂದರು.

ಈಗ ಬಂಟ್ವಾಳ ಶಾಂತಿಯುತವಾಗಿದೆ ಎನ್ನುತ್ತಾರೆ. ಹಿಂದೆ ಮತೀಯ ಹೆಸರಲ್ಲಿ ಹತ್ಯೆಯನ್ನು ಕಾಂಗ್ರೆಸ್ ಮಾಡಿರಲಿಲ್ಲ. ಹತ್ಯೆ ಆರೋಪಿಗಳೊಂದಿಗೆ ತಿರುಗಾಟ ಮಾಡಿದವರು ಯಾರು ಎಂದು ಪ್ರಶ್ನಿಸಿದ ರೈ, ಮರಳು ಮಾಫಿಯಾ, ಇಸ್ಪೀಟ್ ಕ್ಲಬ್ ನವರ ಬ್ಯಾನರ್ ಕಟೌಟ್ ಗಳು ಈಗ ರಾರಾಜಿಸುತ್ತಿವೆ ಎಂದರು.

ಯಾತ್ರೆ ಕುರಿತು ಮುಖಂಡ ಪಿಯೂಸ್ ಎಲ್. ರೋಡ್ರಿಗಸ್ ಮಾಹಿತಿ ನೀಡಿದರು. ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಪದ್ಮಪ್ರಸಾದ್ ಜೈನ್, ಸುದರ್ಶನ ಜೈನ್, ಮಧುಸೂಧನ ಶೆಣೈ, ಅಬ್ಬಾಸ್ ಆಲಿ ಬಿ.ಎಂ., ಮಾಯಿಲಪ್ಪ ಸಾಲಿಯಾನ್. ಸುರೇಶ್ ಜೋರ, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ ಉಪಸ್ಥಿತರಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...