Wednesday, April 10, 2024

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಉಡುಪಿ-ಕಾಸರಗೋಡು ೪೦೦ ಕಿವಿ ವಿದ್ಯುತ್ ಪ್ರಸರಣ ಮಾರ್ಗ ಬಂಟ್ವಾಳ ತಾಲೂಕಿನ ೧೪ ಗ್ರಾ.ಪಂ.ವ್ಯಾಪ್ತಿಯಲ್ಲಿ ಹಾದು ಹೋಗುವುದರ ಕುರಿತು ರೈತರ ಪೂರ್ವಾನುವತಿ ಇಲ್ಲದೆ ಸರ್ವೇ ಕಾರ್ಯ ನಡೆಸಿದ್ದು, ಈ ಕುರಿತು ಯಾವುದೇ ಮಾಹಿತಿ ರೈತರಿಗೆ ನೀಡದೆ, ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದ.ಕ.ಜಿಲ್ಲಾಡಳಿತ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಆರೋಪಿಸಿ ಯೋಜನೆಯ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಹೋರಾಟ ಸಮಿತಿಯ ವತಿಯಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಯುಪಿಸಿಎಲ್‌ನ ವಿದ್ಯುತ್ ಮಾರ್ಗವನ್ನು ಯಾವುದೇ ಜಾಗದಲ್ಲಿ ಕೊಂಡೋಗಲಿ, ಆದರೆ ರೈತರ ಜಮೀನನ್ನು ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ರಾಜ್ಯ ರೈತ ಸಂಘ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು. ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೆÊಲುಗುತ್ತು, ಜಿಲ್ಲಾ ಗೌರವಾಧ್ಯಕ್ಷ ಧನಕೀರ್ತಿ ಬಲಿಪ, ಜಿಲ್ಲಾ ಕಾನೂನು ಸಲಹೆಗಾರ ನ್ಯಾಯವಾದಿ ಎಸ್.ಪಿ.ಚಂಗಪ್ಪ. ಬಂಟ್ವಾಳ ತಾಲೂಕು ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್, ಮಂಗಳೂರು ತಾಲೂಕು ಅಧ್ಯಕ್ಷ ದಯಾನಂದ ಶೆಟ್ಟಿ, ಬಂಟ್ವಾಳ ಗೌರವಾಧ್ಯಕ್ಷ ಮುರುವ ಮಹಾಬಲ ಭಟ್, ತುಳುನಾಡು ಪಂಚಾಯಿತಿ ವೇದಿಕೆ ಅಧ್ಯಕ್ಷ ರೋಶನ್ ಲೋಬೋ, ರೈತ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ ಪಾಲ್ಗೊಂಡಿದ್ದರು.

ಮಾಜಿ ಸಚಿವ ಬಿ.ರಮನಾಥ ರೈ ಅವರು ಸ್ಥಳಕ್ಕಾಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಹಾಗೂ ಎಸಿ ಸರಕಾರಕ್ಕೆ ಈ ಕುರಿತು ಪರ್ಯಾಯ ವ್ಯವಸ್ಥೆಯನ್ನು ಮಾಡುವ ಕುರಿತು ಲಿಖಿತ ವರದಿ ಸಲ್ಲಿಸಿ ವಾರದೊಳಗೆ ಯಥಾಪ್ರತಿಯನ್ನು ರೈತರಿಗೆ ನೀಡುವುದಾಗಿ ಭರವಸೆ ನೀಡಿದರು. ಸ್ಥಳಕ್ಕೆ ಜಿಲ್ಲಾಽಕಾರಿಗಳು ಭೇಟಿ ನೀಡಬೇಕೆಂದು ರೈತರು ರಸ್ತೆ ತಡೆಯನ್ನು ಕೈಗೊಂಡರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...