Sunday, April 14, 2024

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಬೆಂಗಳೂರಿನಲ್ಲಿದ್ದ ಮೊತ್ತೋರ್ವ ಆರೋಪಿ ಅರೆಸ್ಟ್‌

ಬೆಂಗಳೂರು: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ.

ತೌಫೀಲ್​ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಎನ್ಐಎ ಅಧಿಕಾರಿಗಳು ನಿನ್ನೆ ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು.

20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ NIA

ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...