Thursday, April 11, 2024

ಮಾ.5 ರಂದು ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ (ರಿ.) ದ.ಕ.ಇದರ ಉದ್ಘಾಟನೆ ಸಮಾರಂಭ

ಬಂಟ್ವಾಳ: ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ (ರಿ.) ದ.ಕ.ಇದರ ಉದ್ಘಾಟನೆ ಸಮಾರಂಭ ಮಾ.5 ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆಯಲಿದೆ ನಿಯೋಜಿತ ಅಧ್ಯಕ್ಷ ಜಯರಾಮ ಶೆಟ್ಟಿ ಗಾರ್ ಅವರು ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ವಿಷಯ ತಿಳಿಸಿದರು. ಸಂತೆ ವ್ಯಾಪಾರಸ್ಥರ ಶೋಷಣೆಯನ್ನು ತಡೆಯಲು ಮತ್ತು

ವ್ಯಾಪಾರಸ್ಥರಿಗೆ ಜಾತ್ರೆ ಸಂದರ್ಭದಲ್ಲಿ ಜಾಗದ ನೆಲ ಬಾಡಿಗೆ ವಿಚಾರದಲ್ಲಿ ನಡೆಯುವ ದಬ್ಬಾಳಿಕೆಯನ್ನು ತಡೆಗಟ್ಟಲು ನೂತನವಾಗಿ ಸಂಘ ಸ್ಥಾಪನೆ ಮಾಡಲಾಗಿದೆ.

ಹೊರ ರಾಜ್ಯದಿಂದ ಬಂದವರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು, ಊರಿನ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂಬುದು ಒತ್ತಾಯವಾಗಿದೆ.

ನೂತನವಾಗಿ ಸ್ಥಾಪನೆಯಾಗಲಿರುವ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಉದ್ಘಾಟನೆ ಮಾಡಲಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಸಹಿತ ಅನೇಕ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು.

ಈ ಸಂದರ್ಭಲ್ಲಿ ಸತೀಶ್ ಬಂಗೇರ, ರವೀಂದ್ರ ದಾಸ್, ಪ್ರಕಾಶ್ ಪೂಜಾರಿ ವೀರಕಂಭ, ತುಕಾರಾಂ ಕುಲಾಲ್ ಕಲ್ಲಡ್ಕ ಉಪಸ್ಥಿತರಿದ್ದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...