Saturday, April 6, 2024

ಪುದು ಗ್ರಾ.ಪಂ ಅಧ್ಯಕ್ಷೆಯಾಗಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ರಶೀದಾ ಬಾನು ಉಪಾಧ್ಯಕ್ಷರಾಗಿ ಇಕ್ಬಾಲ್ ಸುಜೀರ್ ಆಯ್ಕೆ

ಪುದು ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ರಶೀದಾ ಬಾನು ಉಪಾಧ್ಯಕ್ಷರಾಗಿ ಇಕ್ಬಾಲ್ ಸುಜೀರ್ ಆಯ್ಕೆಯಾಗಿದ್ದಾರೆ.

ಪುದು ಗ್ರಾಮಪಂಚಾಯತ್ ಅಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಎಸ್. ಡಿ.ಪಿ.ಐ.ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ‌ಸ್ಥಾನಕ್ಕೆ ಕಾಂಗ್ರೆಸ್ ,ಬಿಜೆಪಿ ಹಾಗೂ ಎಸ್‌ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು.

ಎಸ್.ಡಿ.ಪಿ. ಪಕ್ಷದ ಬೆಂಬಲಿತೆ ಅಧ್ಯಕ್ಷ ಸ್ಥಾನಕ್ಕೆ ರುಕ್ಸಾನಾ ಬಾನು, ಉಪಾಧ್ಯಕ್ಷ ಸ್ಥಾನಕ್ಕೆ ನಜೀರ್, ಬಿಜೆಪಿ ಯಿಂದ ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮನಾಭ ಅವರು ಸ್ಪರ್ಧೆ ಮಾಡಿದ್ದರು.

ಕಾಂಗ್ರೆಸ್ 20, ಎಸ್.ಡಿ.ಪಿ.ಐ.ಗೆ 7, ಬಿಜೆಪಿ ಗೆ 6 ಮತಗಳನ್ನು ಪಡೆದರು. ಅತೀ ಹೆಚ್ಚು ಮತ ಪಡೆದ ಕಾಂಗ್ರೆಸ್ ಪಕ್ಷದ ಬೆಂಬಲಿತರು ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು.

ಕಾಂಗ್ರೆಸ್ ಬೆಂಬಲಿತ 21 ಅಭ್ಯರ್ಥಿಗಳು, ಎಸ್.ಡಿ.ಪಿ.ಐ. ಬೆಂಬಲಿತ 7 ಅಭ್ಯರ್ಥಿಗಳು, ಬಿಜೆಪಿ ಬೆಂಬಲಿತ 6 ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಸತತವಾಗಿ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರು ಪುದು ಗ್ರಾಮ ಪಂಚಾಯತ್ ನಲ್ಲಿ ಪ್ರಾಬಲ್ಯವನ್ನು ಹೊಂದಿ, ಆಡಳಿತ ನಡೆಸುತ್ತಿದ್ದಾರೆ.

ಈ ಬಾರಿ ಮತ್ತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಳು ಗೆಲುವು ಸಾಧಿಸಿ ಅಧ್ಯಕ್ಷೆ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ‌ಮಂಗಳೂರು ಶಾಸಕ ಯು.ಟಿ.ಖಾದರ್ ಅಭಿನಂದನೆ ಸಲ್ಲಿಸಿದರು.

ಕಳೆದ ಐದು ವರ್ಷಗಳ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಜನ ಗುರುತಿಸಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ ಅಭಿನಂದನೆಗಳು ಎಂದು ಮಾಜಿ ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ರಶೀದಾ ಬಾನು

ಕಳೆದ ಐದು ವರ್ಷಗಳ ಆಡಳಿತಕ್ಕೆ ನೀಡಿದ ಸಹಕಾರ ನಮಗೂ ನೀಡಿ, ಶಾಸಕ ಯ.ಟಿ.ಖಾದರ್ ಅವರ ಮಾರ್ಗದರ್ಶನ ದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಜಾತ್ಯಾತೀತ ನೆಲೆಯಲ್ಲಿ ‌ಮಾಡುವುತ್ತೇವೆ ಎಂದು ಭರವಸೆ ನೀಡಿದರು.

ತಾ.ಪಂ.ಇ.ಒ.ರಾಜಣ್ಣ,ಪಿ.ಡಿ.ಒ.ಹರೀಶ್ ಚುನಾವಣೆ ‌ಪ್ರಕ್ರಿಯೆ ನಡೆಸಿಕೊಟ್ಟರು. ಮತದಾನದ ಮೂಲಕ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ 2 ಎ ಮಹಿಳೆ ಉಪಾಧ್ಯಕ್ಷೆ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಬಂದಿತ್ತು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...