Saturday, April 13, 2024

ಪುಣಚದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ವಿಟ್ಲ: ಭಾರತ ಜಗತ್ತಿಗೆ ಇತರ ದೇಶಗಳ ಮಧ್ಯೆ ಹತ್ತಾರು ವಿಚಾರಗಳಲ್ಲಿ ಪ್ರಗತಿ ಪಥದಲ್ಲಿ ಸಾಗುತ್ತಿದೆಯಾದರೂ, ದೇಶದ ಜನರ ಆಯುಷ್ಯದ ಪ್ರಮಾಣದಲ್ಲಿ ಸರಾಸರಿ 68 ವಯಸ್ಸಿಗಿಂತಲೂ ಇಳಿಮುಖವಾಗುತ್ತಿರುವುದು ಖೇದಕರ ಎಂದು ಕಂಪಾನಿಯೋ ಕಂಪನಿಯ ಪ್ರವರ್ತಕ ಸೀತಾರಾಮ ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಪುಣಚ ಗ್ರಾಮ ಪಂಚಾಯತ್, ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಮತ್ತು ಕಂಪಾನಿಯೋ ಪುತ್ತೂರು ಆಶ್ರಯದಲ್ಲಿ ನಡೆದ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಮನೆಯಲ್ಲಿಯೇ ಕುಳಿತು ಮಧುಮೇಹ, ಅಧಿಕ ರಕ್ತದೊತ್ತಡ, ಸಂಧಿವಾತ,ವೆರಿಕೋಸ್ ವೇನ್, ಬೆನ್ನುನೋವು , ಪಾರ್ಶ್ವವಾಯು, ಥೈರಾಯ್ಡ್ ನಂತಹ ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳ ಬಹುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ಮಾತನಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಇಂತಹ ಶಿಬಿರಗಳು ಪರಿಣಾಮಕಾರಿಯಾಗಿದೆ. ಅತ್ಯಂತ ಸುಲಭವಾಗಿ ಆರೋಗ್ಯ ವೃದ್ಧಿಸಿಕೊಳ್ಳಲು ಸಾಧ್ಯ ಎಂದರು.

ಸಮಾರಂಭದಲ್ಲಿ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರಪ್ಪ ಮೂಲ್ಯ, ಸಂಘದ ನಿರ್ದೇಶಕ ಉದಯಕುಮಾರ್ ದಂಬೆ ಭಾಗವಹಿಸಿದ್ದರು.

ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಪ್ರವರ್ತಕ ಕೆ.ಪ್ರಭಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ರಾಜೇಂದ್ರ ರೈ ಬಿ. ವಂದಿಸಿದರು. ಕಂಪಾನಿಯೋ ಸಂಸ್ಥೆಯ ಪ್ರಶಾಂತ್, ಸಂಧ್ಯಾಶ್ರೀ ಸಹಕರಿಸಿದರು. ನೂರಾರು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...