Monday, April 8, 2024

ಪುತ್ತೂರಿನ ಬಹುವರ್ಷದ ಬೇಡಿಕೆಯಾದ ವಿವೇಕಾನಂದ ಕಾಲೇಜು ರೈಲ್ವೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಮಾ.26ರಂದು ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು.

ರೈಲ್ವೇ ಮೇಲ್ಸೇತುವೆಯ ಬಳಿ ತೆಂಗಿನ ಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪಥ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ನರೇಂದ್ರದ ಮುಂದಿರುವ ಚತುಷ್ಪಥ ರಸ್ತೆಯಂತೆ ನೆಹರುನಗರ ದಿಂದ ವಿವೇಕಾನಂದ ಕಾಲೇಜು ಆಗಿ ಉಪ್ಪಿನಂಗಡಿ ಸಂಪರ್ಕಿಸುವ ಪಡೀಲು ತನಕ ಚತುಷ್ಪಥ ರಸ್ತೆಗೆ ಪ್ರಸ್ತಾನವೆ ನೀಡಲಾಗಿದೆ. ಅದು ಲೋಕೋಪಯೋಗಿ ಇಲಾಖೆ ಮತ್ತು ಕೇಂದ್ರಕ್ಕೆ ಕೊಟ್ಟಿದ್ದೇವೆ. ಹಾಗಾಗಿ ರೈಲ್ವೇ ಮೇಲ್ಸೇತುವೆ ಅಗಲೀಕರಣ ಆದ ತಕ್ಷಣ 2ನೇ ಆದ್ಯತೆ ರಸ್ತೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳುತ್ತೆವೆ ಎಂದರು.

ಪುತ್ತೂರಿಗೆ ರೈಲು ಬಂದು ಸುಮಾರು 40 ವರ್ಷ ದಾಟಿದೆ. ರೈಲ್ವೇ ಇಲಾಖೆಯಲ್ಲಿ ಅಶ್ವಿನಿ ವೈಷ್ಣವ್ ಅವರು ಸಚಿವರಾದ ಬಳಿಕ ಪುತ್ತೂರಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಅದರೆ ಈ ಕೊಡುಗೆ ಲಭಿಸಲು ಅದರ ಹಿಂದೆ ನಮ್ಮ ಸಂಸದರಾಗಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೀಗೆ ಒಂದಷ್ಟು ಮಂದಿ ಹಿರಿಯರು ಕೆಲಸ ಮಾಡಿದ್ದಾರೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್, ಟಿ.ಎಸ್ ಭಟ್, ಬಲರಾಮ ಆಚಾರ್ಯ, ಸತೀಶ್ ಭಟ್, ಕೇಂದ್ರ ಸರಕಾರದ ದಿಶಾ ನಾಮನಿರ್ದಶಿತ ಸದಸ್ಯ ರಾಮದಾಸ್ ಹಾರಾಡಿ, ನಗರಸಭೆ ಸ್ಥಳೀಯ ಸದಸ್ಯ ವಸಂತ ಕಾರೆಕ್ಕಾಡು, ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ್, ನಗರಸಭೆ ಮಾಜಿ ಉಪಾಧ್ಯಕ್ಷ ವಿಶ್ವನಾಥ ಗೌಡ, ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವಿ ನೆಲಪ್ಪಾಲು, ರಾಘವೇಂದ್ರ ಪ್ರಭು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...