Monday, April 8, 2024

ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಗೆ ರಕ್ಷಿತ್ ಶೆಟ್ಟಿ ತಿರುಗೇಟು

ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ನಟ ರಕ್ಷಿತ್ ಶೆಟ್ಟಿ ಕೂಡ ಟ್ವೀಟ್ ಮಾಡಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂಡಬಿದಿರೆಯಲ್ಲಿ ನಡೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಮಿಥುನ್‌ ರೈ, ಮಾತನಾಡಿ ಉಡುಪಿ ಮಠಕ್ಕೆ ಮುಸ್ಲಿಂ ರಾಜರು ಜಾಗ ನೀಡಿದ್ದಾರೆ. ಸೌಹಾರ್ದತೆಯನ್ನು ಹೊಂದಿರುವ ಜಿಲ್ಲೆ ದಕ್ಷಿಣ ಕನ್ನಡ. ಬಪ್ಪನಾಡು ದುರ್ಗಾಪರಮೇಶ್ವರಿ ದೇವರು ಒಲಿದಿದ್ದು ಬಪ್ಪ ಬ್ಯಾರಿಗೆ. ತುಳುನಾಡಿನಲ್ಲಿ ಪವಾಡ ದೈವ ಕೊರಗಜ್ಜ ಕಟ್ಟೆಯೊಂದರಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಯಿಂದ ಪೂಜೆ ನಡೆಯುತ್ತೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ನಟ ರಕ್ಷಿತ್‌ ಶೆಟ್ಟಿ ಟ್ವೀಟ್ ಮಾಡಿ, ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ (...

ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...