ಬಿಸಿರೋಡಿಲ್ಲಿ ಮಾ.18 ರಂದು ನಡೆಯಲಿರುವ ಜಿಲ್ಲಾ ಮಟ್ಟದ ರೈತ ಮೋರ್ಚಾದ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಅಣ್ಣಳಿಕೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರೈತಮೋರ್ಚಾದ ಸಮಾವೇಶ ಯಶಸ್ವಿಯಾಗುವ ನಿಟ್ಟಿನಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಿ. ಸಮಾವೇಶದಲ್ಲಿ ಹೆಚ್ಚಿನ ರೈತರು ಭಾಗಿಯಾಗುವ ನಿಟ್ಟಿನಲ್ಲಿ ಕ್ಷೇತ್ರ ಮಟ್ಟದಲ್ಲಿ ಸಭೆ ನಡೆಸಿ ಎಂದು ಅವರು ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲು, ಜಿಲ್ಲಾ ಮಾಧ್ಯಮ ಸಹಸಂಚಾಲಕ ಸಂದೇಶ್ ಶೆಟ್ಟಿ ಅರೆಬೆಟ್ಟು, ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ,ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಳಿಕೆ, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮೇನಾಲ, ಬಾಲಕೃಷ್ಣ ಬಾಣಜಾಲು, ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿ ಸಂಜೀವ ಪೂಜಾರಿ, ಬಂಟ್ವಾಳ ಮಂಡಲದ ಕಾರ್ಯದರ್ಶಿ ರಮನಾಥ ರಾಯಿ, ರಾಯಿ ಗ್ರಾ.ಪಂ. ಅಧ್ಯಕ್ಷೆ ರತ್ನಾ,ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಸದಸ್ಯರಾದ ಸಂತೋಷ್ ರಾಯಿಬೆಟ್ಟು,ದಿನೇಶ್ ಮಡಂದೂರು,ಸಂತೋಷ್ ಗೋಲಿತ್ತಬೆಟ್ಟು, ಗುಣವತಿ, ಉಷಾ ಮತ್ತಿತರರು ಉಪಸ್ಥಿತರಿದ್ದರು.