Saturday, April 13, 2024

ಕುಕ್ಕರ್‌ ಬಾಂಬ್ ಸ್ಫೋಟ ಪ್ರಕರಣ : ಮಾ.15ರವರೆಗೆ ಶಾರಿಕ್ ಎನ್‌ಐಎ ಕಸ್ಟಡಿಗೆ

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಹೆಚ್ಚಿನ ವಿಚಾರಣೆಗಾಗಿ ಈತನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಮಾರ್ಚ್ 15ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಸ್ಫೋಟದಲ್ಲಿ ತೀವ್ರ ಗಾಯಗೊಂಡಿದ್ದ ಶಾರಿಕ್‌ಗೆ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣಿಸದಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೂರೂವರೆ ತಿಂಗಳು ಚಿಕಿತ್ಸೆ ಪಡೆದಿದ್ದ ಶಾರಿಕ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಈತನನ್ನು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಇನ್ನು ಶಾರೀಕ್‌ನ ಚಿಕಿತ್ಸೆ ಸಮಯದಲ್ಲಿ ಎನ್‌ಐಎ ಅಧಿಕಾರಿಗಳು ಕಾವಲಿಗಿದ್ದರು. ಶಾರಿಕ್ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ವಶಕ್ಕೆ ಪಡೆದ ಅಧಿಕಾರಿಗಳು, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ‘ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್‌ನನ್ನು ಇದುವರೆಗೂ ವಿಚಾರಣೆ ಮಾಡಿಲ್ಲ. ಈತ, ಭಯೋತ್ಪಾದನಾ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಮಾಹಿತಿ ಇದೆ. ವಿಚಾರಣೆಗಾಗಿ ಈತನನ್ನು ಕಸ್ಟಡಿಗೆ ನೀಡಬೇಕು’ ಎಂದು ಎನ್‌ಐಎ ಅಧಿಕಾರಿಗಳು ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಾರಿಕ್‌ನನ್ನು ಕಸ್ಟಡಿಗೆ ವಹಿಸಿತು.

More from the blog

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...