ಹಾಸನ: ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಜಿನೈಕ್ಯರಾಗಿದ್ದಾರೆ.
73 ವರ್ಷದ ಸ್ವಾಮೀಜಿಯವರು ಕೆಲಕಾಲದಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು. ಐದು ದಶಕಗಳ ಕಾಲ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಅಹಿಂಸೆ, ತ್ಯಾಗ ಹಾಗೂ ಶಾಂತಿಯಿಂದ ಜೈನ ಪರಂಪರೆಯನ್ನು ಬೆಳಗಿದ್ದರು.
ಪ್ರಾಚೀನ ಧರ್ಮಪೀಠದ ಪೀಠಾಧಿಪತಿಗಳಾದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಅಪಾರ ಭಕ್ತರು ಆಗಮಿಸಲಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.