Saturday, April 20, 2024

ಮಾ.5ರಂದು ಬಿಜೆಪಿ ಎಸ್.ಟಿ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಸಮಾವೇಶ

ಪುತ್ತೂರು: ಬಿಜೆಪಿಯಿಂದ ಚುನಾವಣೆ ಹಿತದೃಷ್ಟಿಯಿಂದ ಮಾರ್ಚ್ ನಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ, ಮೋರ್ಚಾಗಳ ಸಮಾವೇಶ, ಫಲಾನುಭವಿಗಳ ಸಮಾವೇಶ, ಪ್ರಗತಿ ರಥ ವಾಹನ, ಪ್ರಣಾಳಿಕೆಗೆ ಸಲಹೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಮಾ.5ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್ಟಿ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಸಮಾವೇಶ ನಡೆಯಲಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎನ್.ಎಸ್ ಮಂಜುನಾಥ ನಾಯ್ಕ ಅವರು  ಹಿಂದುತ್ವ, ರಾಷ್ಟ್ರೀಯ ವಿಚಾರಧಾರೆಯ ಅಡಿಯಲ್ಲಿ ಬಿಜೆಪಿ ಸರಕಾರ ಎಸ್.ಟಿ. ಸಮುದಾಯದ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದು, ಎಸ್.ಟಿ ಸಮುದಾಯವು ಬಿಜೆಪಿ ಕಡೆಗಿದೆ ಎಂಬ ಸಂದೇಶವನ್ನು ಸಮಾವೇಶ ನೀಡಲಿದೆ.
ಭಾರತದ ಅತ್ಯುನ್ನತ ರಾಷ್ಟ್ರಪತಿ ಸ್ಥಾನವನ್ನು ದ್ರೌಪದಿ ಮುರ್ಮುರವರಿಗೆ ನೀಡುವ ಮೂಲಕ ಮತ್ತು ಸುರಂಗ ಮೂಲಕ ಜಲಧಾರೆಯನ್ನು ಕಂಡುಕೊಂಡ ಬರಡು ನೆಲವನ್ನು ಹಸಿರಾಗಿಸಿದ ಅಮೈ ಮಹಾಲಿಂಗ ನಾಯ್ಕರಿಗೆ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಎಸ್.ಟಿ.ಸಮುದಾಯಕ್ಕೆ ಬಿಜೆಪಿ ಗೌರವ ನೀಡಿದೆ. ರಾಜ್ಯ ಸರಕಾರ ಎಸ್.ಟಿ. ಸಮುದಾಯದ ಮಿಸಲಾತಿಯನ್ನು ಶೆ. 3 ರಿಂದ 7ಕ್ಕೆ ಹೆಚ್ಚಿಸಿದ್ದು, ಎಸ್.ಟಿ. ಸಮುದಾಯದಲ್ಲಿರುವ ಬಿಪಿಎಲ್ ಕುಟುಂಬಸ್ಥರಿಗೆ 75 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಿರುವುದು, ಪರಿಶಿಷ್ಟ ಪಂಗಡದ ಸಚಿವಾಲಯ ಸ್ಥಾಪನೆ, ವಾಲ್ಮೀಕಿ ನಿಗಮ ಸ್ಥಾಪನೆ, ಮುಂತಾದ ಹಲವಾರು ಯೋಜನೆಯನ್ನು ಸರಕಾರ ನೀಡಿದೆ. ಈ ಕುರಿತು ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಬೃಹತ್ ಸಮಾವೇಶ ನಡೆಯಲಿದೆ.

ಸಮಾವೇಶವು ಬೆಳಿಗ್ಗೆ ಗಂಟೆ 10ಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಎಸ್.ಅಂಗಾರ ಸಹಿತ ಹಲವಾರು ಮಂದಿ ರಾಜ್ಯದ ಪ್ರಮುಖರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...