Sunday, April 7, 2024

ಕರ್ತವ್ಯ ಲೋಪ ಆರೋಪ : ಪಾಂಡೇಶ್ವರ ಠಾಣೆಯ ಮಹಿಳಾ ಹೆಡ್‌ಕಾನ್‌ಸ್ಟೆಬಲ್‌ ಅಮಾನತು

ಮಂಗಳೂರು: ದೂರುದಾರರ ವಿರುದ್ಧವೇ ಕರ್ತವ್ಯಕ್ಕೆ ಅಡ್ಡಿ ಆರೋಪ ಹೊರಿಸಿ ಸ್ವತಃ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶ್ರೀಲತಾರನ್ನು ಮಂಗಳೂರು ಪೊಲೀಸ್‌ ಆಯುಕ್ತರು ಅಮಾನತು ಗೊಳಿಸಿದ್ದಾರೆ.

ದಂಪತಿಯ ಮಧ್ಯೆ ನಡೆಯುತ್ತಿದ್ದ ಕಲಹಕ್ಕೆ ಸಂಬಂಧಿಸಿ ಬಂದ ದೂರಿನ ಹಿನ್ನೆಲೆಯಲ್ಲಿ ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಸಂಧಾನದ ನೆಪದಲ್ಲಿ ಹಣಕಾಸಿನ ವ್ಯವಹಾರ ಕುದುರಿಸಲು ಮುಂದಾಗಿದ್ದರು ಎನ್ನಲಾಗಿದೆ.

ಇದನ್ನು ಗಮನಿಸಿದ ದೂರುದಾರರು ಮೊಬೈಲ್‌ ಫೋನ್ ನಲ್ಲಿ ವೀಡಿಯೋ ಮಾಡುತ್ತಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಶ್ರೀಲತಾ ದೂರು ದಾಖಲಿಸಿದ್ದರು. ಈ ಬಗ್ಗೆ ಫೆ.23ರಂದು ಬಂದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಫೆ.28ರಂದು ಶ್ರೀಲತಾರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆ ಆರಂಭಿಸಲಾಗಿದೆ ಎಂದು ಡಿಸಿಪಿ ಅಂಶುಕುಮಾರ್‌ ತಿಳಿಸಿದ್ದಾರೆ.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...