Wednesday, April 17, 2024

ಕೂರಿಯಾಳ ಗುರು ಸಮಾಜ ಸೇವಾ ಸಂಘ ಇದರ ೫ನೇ ವರ್ಷದ ವಾರ್ಷಿಕೋತ್ಸವ

ಬಿ.ಸಿ.ರೋಡು: ಕೂರಿಯಾಳ ಗುರು ಸಮಾಜ ಸೇವಾ ಸಂಘ ಇದರ ೫ನೇ ವರ್ಷದ ವಾರ್ಷಿಕೋತ್ಸವವು ಮಾರ್ಚ್ 11ರಂದು ಶನಿವಾರ ಕೂರಿಯಾಳ ಮೇಗಿನಕೆರೆ ದೊಂಪದ ಬಲಿ ಕ್ಷೇತ್ರದಲ್ಲಿ ಸಂಜೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಾಜಿ ಸಚಿವ ರಮಾನಾಥ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಪ್ರಗತಿಪರ ಕೃಷಿಕ ರಘುನಾಥ ಪಯ್ಯಡೆ, ಪ್ರಗತಿಪರ ಕೃಷಿಕ ಪ್ರಸನ್ನಃ ಭಂಡಾರಿ ಬಳ್ಳಿ, ನಿವೃತ್ತಿ ಮುಖ್ಯ ಶಿಕ್ಷಕಿ ಸಿಪ್ರಿಯನ್ ಡಿಸೋಜ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಶ್ರೀ ತುಳಸಿ ಕಲಾ ತಂಡದ ಕಲಾವಿದರಿಂದ ಹಾಸ್ಯ ಪ್ರಹಸನ ಮತ್ತು ಸಭಾ ಕಾರ್ಯಕ್ರಮದ ನಂತರ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ರಾಘವ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...