Friday, April 12, 2024

ಮಾ.12 ರಂದು ಬಂಟ್ವಾಳಕ್ಕೆ ವಿಜಯ ಸಂಕಲ್ಪ ಯಾತ್ರೆ… ಪುಂಜಾಲಕಟ್ಟೆಯಲ್ಲಿ ಅದ್ದೂರಿ ಸ್ವಾಗತಕ್ಕೆ ನಿರ್ಧಾರ…. ಪುಂಜಾಲಕಟ್ಟೆಯಿಂದ ಬಂಟ್ವಾಳದವರೆಗೆ ಬೈಕ್ ರ‍್ಯಾಲಿ… ಬಂಟ್ವಾಳ ಪೇಟೆಯಲ್ಲಿ ರೋಡ್ ಶೋ

ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯನ್ನು 12.45 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಅನುದಾನ ಬಿಡುಗಡೆಗೊಳಿಸಲಾಗಿದೆ, ಟೆಂಡರ್ ಹಂತದಲ್ಲಿದೆ ಜೊತೆಗೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪುಂಜಾಲಕಟ್ಟೆಯಲ್ಲಿ ನಿರ್ಮಾಣ, ಪುಂಜಾಲಕಟ್ಟೆಯಲ್ಲಿ ಕ್ರೀಡಾಂಗಣಕ್ಕೆ ಹೈ ಟೆಕ್ ಸ್ಪರ್ಶ ಹೀಗೆ ಕೋಟ್ಯಾಂತರ ರೂ ಅನುದಾನ ನೀಡುವ ಮೂಲಕ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು‌.
ಅವರು ಜಿ.ಪಂ..ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ಮನೆಯಲ್ಲಿ ನಡೆದ ಕಾರ್ಯಕರ್ತರ ಸಭೆ ಹಾಗೂ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಧಾನ ಸಭಾ ಚುನಾವಣೆ ಸಮೀಸುತ್ತಿದ್ದು, ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು, ಕಾರ್ಯಕರ್ತರು ಜತೆಯಾಗಿ ಕೆಲಸ ಮಾಡಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.
ರಾಜಕೀಯವಾಗಿ ಅಧಿಕಾರ ಅಗತ್ಯವಿದೆ, ಈ ನಿಟ್ಟಿನಲ್ಲಿ ಮತ್ತೊಮ್ಮೆ ಕಾರ್ಯಕರ್ತರಿಗೆ ಗೌರವ ಸಿಗಬೇಕು, ಕ್ಷೇತ್ರದ ಅಭಿವೃದ್ಧಿಯಾಗಬೇಕು, ಶಾಂತಿಯ ಬಂಟ್ವಾಳವಾಗಿ ಉಳಿಯಬೇಕಾದರೆ ಬಂಟ್ವಾಳ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಅವರು ತಿಳಿಸಿದರು.

ಮಾಜಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಮಾತನಾಡಿ, ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಶಾಸಕರು ಮಾಡಿದ್ದಾರೆ. ಪುಂಜಾಲಕಟ್ಟೆ ವ್ಯಾಪ್ತಿಯ ಜನರ ಬಹುತೇಕ ಎಲ್ಲಾ ಬೇಡಿಕೆಗಳನ್ನು ಪೂರೈಸಿದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಕೇಳಿದ್ದನ್ನು ಕೊಡುವ ಕಾಮದೇನು ನಮ್ಮ ಶಾಸಕರು ಮತ್ತೊಮ್ಮೆ ಆಯ್ಕೆಯಾಗಬೇಕು, ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಂಘಟನಾತ್ಮಕವಾಗಿ ಕೆಲಸ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಮಾರ್ಚ 12 ರಂದು ವಿಜಯ ಸಂಕಲ್ಪ ಯಾತ್ರೆ ಆಗಮಿಸಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜತೆಯಾಗಬೇಕು ಎಂದು ಅವರು ಮನವಿ ಮಾಡಿದರು.
ವಿಜಯ ಸಂಕಲ್ಪ ಯಾತ್ರೆ ಯನ್ನು ಪುಂಜಾಲಕಟ್ಟೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ನಿಶ್ಚಯ ಮಾಡಲಾಗಿದೆ.
ಪುಂಜಾಲಕಟ್ಟೆಯಿಂದ ಬೈಕ್ ರ‍್ಯಾಲಿ ಮೂಲಕ ಹೊರಟು ಬಂಟ್ವಾಳ ದಲ್ಲಿ ರೋಡ್ ಶೋ. ವಿವಿಧ ಆಕರ್ಷಕವಾದ ಯಾತ್ರೆಯ ಮೂಲಕ ಬಂಟ್ಚಾಳಕ್ಕೆ ಆಗಮನವಾಗುತ್ತದೆ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿಗಳಾದ ರಮನಾಥ ರಾಯಿ , ಚಿದಾನಂದ ರೈ ಕಕ್ಯ,
ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಿಲ್ಲವ ಸಂಘದ ಅಧ್ಯಕ್ಷ ಗಿರೀಶ್ ಹೆಗ್ಡೆಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...