Tuesday, April 16, 2024

ಸಾರ್ವಜನಿಕ ಹಣ ಖಾಸಗಿ ವ್ಯಕ್ತಿಗೆ ದುರ್ಬಳಕೆ : ಕಾಂಗ್ರೆಸ್ ಆರೋಪ

ವಿಟ್ಲ: ವಿಟ್ಲ ಚಂದಳಿಕೆಯ ಮುದೂರು ಭಾಗದಲ್ಲಿ ರಾಜಕಾಲುವೆಯನ್ನು ಮಣ್ಣು ತುಂಬಿಸಿ ಮುಚ್ಚಿ, ಮಾರ್ಗವನ್ನು ಅತಿಕ್ರಮಣ ಮಾಡುವ ಕಾರ್ಯ ಮಾಡಲಾಗಿದೆ. ಕಾನೂನಿಗೆ ವಿರುದ್ಧವಾಗಿ ಖಾಸಗಿ ಜಾಗಕ್ಕೆ ಸಾರ್ವಜನಿಕ ಹಣದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಹೇಳಿದರು.

ಕಬಕ – ಕಂಬಳಬೆಟ್ಟು ಮಧ್ಯೆ ನಡೆಯುತ್ತಿರುವ ಡಾಂಬರು ಪ್ರಕ್ರಿಯೆ ಸೂಕ್ತ ರೀತಿಯಲ್ಲಿ ನಡೆಯುತ್ತಿಲ್ಲ. ಮಾಡಿದ ಕಾಮಗಾರಿ ಮಳೆಗಾಲದಲ್ಲಿ ನಿಲ್ಲುವುದೇ ಅನುಮಾನ ಎಂಬಂತಿದೆ. ಅಡಿಪಾಯ ಸರಿಯಾಗದೇ ಮೇಲೆ ಎಷ್ಟು ಪದರ ಹಾಕಿದರೂ ಪ್ರಯೋಜನ ಇಲ್ಲ. ಪಟ್ಟಣ ಪಂಚಾಯಿತಿಯ ಅವ್ಯವಸ್ಥೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ನೀಡುವ ಕಾರ್ಯ ಮಾಡುತ್ತೇವೆ ಎಂದು ವಿಟ್ಲದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ವಿ.ಕೆ.ಎಂ. ಅಶ್ರಫ್ ಮಾತನಾಡಿ ನಗರೋತ್ಥಾನ ಯೋಜನೆಯ ೫ಕೋಟಿಯಲ್ಲಿ ೪.೨೫ಕೋಟಿ ಕಾಮಗಾರಿಯನ್ನು ಪಟ್ಟಣ ಪಂಚಾಯಿತಿಯ ೧೮ ವಾರ್ಡ್ ಗಳಲ್ಲಿ ಕೆಲವು ವಾರ್ಡ್ ಗೆ ಮಾತ್ರ ಇಡುವ ಮೂಲಕ ತಾರತಮ್ಯ ಮಾಡಿದ್ದಾರೆ. ಈ ಬಗ್ಗೆ ಪುತ್ತೂರು ಶಾಸಕರಿಗೆ ಮನವಿಯನ್ನು ಮಾಡಿದ್ದರೂ, ಕ್ರಿಯಾ ಯೋಜನೆಯಲ್ಲಿ ನಾವು ಸಾರ್ವಜನಿಕರಿಗೆ ಅತೀ ಅಗತ್ಯವಿದ್ದ ಕಾಮಗಾರಿಗಳನ್ನು ಸೂಚಿಸಿದ ಒಂದೇ ಒಂದು ಕಾಮಗಾರಿಗೂ ಅನುದಾನ ನೀಡಿಲ್ಲ. ಪಕ್ಷದ ಬೂತ್ ಅಧ್ಯಕ್ಷರ ಜಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಿತ್ತಿರುವುದು, ಖಾಸಗೀ ಜಾಗಕ್ಕೆ ರಸ್ತೆ ನಿರ್ಮಾಣ ಮಾಡುವ ಕಾರ್ಯ ಮೇಗಿನಪೇಟೆ, ನಿಡ್ಯ, ಮುದೂರು, ಕಲ್ಲಕಟ್ಟ ಸೇರಿ ವಿವಿಧ ಭಾಗದಲ್ಲಿ ಆಗಿದೆ. ಪಂಚಾಯಿತಿಗೆ ಮುಂದೆ ಸ್ವಾಧೀನಕ್ಕೆ ಸಿಗದ ಜಾಗಕ್ಕೆ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ. ಕಲ್ಲಕಟ್ಟ ಸೇರಿ ವಿವಿಧ ಅಣೆಕಟ್ಟುಗಳನ್ನು ಕಟ್ಟದ ಕಾರಣ ಪಟ್ಟಣ ಪಂಚಾಯಿಯ ವಿವಿಧ ಭಾಗದಲ್ಲಿ ನೀರಿನ ಅಭಾವ ತಲೆದೋರಿದೆ. ನೀರಿನ ವ್ಯವಸ್ಥೆಯನ್ನು ಮಾಡುವ ಪರಿಸ್ಥಿತಿ ಇಲ್ಲದಂತಾಗಿದೆ. ಮಾಡುವ ಬಗ್ಗೆ ಭರವಸೆಯನ್ನು ನೀಡಲಾಗುತ್ತಿದೆ ಹೊರತು ಯಾವುದೂ ಕಾರ್ಯ ರೂಪಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕುರುಂಬಳ ಉಪಸ್ಥಿತರಿದ್ದರು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...