Saturday, April 6, 2024

‘ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಹಂಚಲಾಗಿದೆ’- ಸಂಜೀವ ಮಠಂದೂರು 

ವಿಟ್ಲ: ಜಾತಿ ಮತ ನೋಡದೇ ಎಲ್ಲರಿಗೂ ಸರ್ಕಾರದ ಯೋಜನೆಗಳನ್ನು ಹಂಚಲಾಗಿದೆ. ಸರ್ಕಾರದ ಸವಲತ್ತಿನಿಂದ ವಂಚಿತನಾಗಬಾರದೆಂದು ಸರ್ಕಾರ ವಿವಿಧ ನಿಯಮಗಳನ್ನು ಜಾರಿಗೆ ತಂದಿದೆ. ಉಡುಪಿ – ಕಾಸರಗೋಡು ೪೦೦ ಕೆ. ವಿ. ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯನ್ನು ನಿಲ್ಲಿಸುವ ಕಾರ್ಯ ಮಾಡಲಾಗಿದೆ. ರೈತರಿಗೆ ಅನ್ಯಾಯವಾಗುವ ಕೆಲಸವನ್ನು ತಡೆ ಹಿಡಿಯುವ ಕೆಲಸವನ್ನು ಮಾಡುತ್ತೇವೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಭಾನುವಾರ ಚಂದಳಿಕೆ ಭಾರತ್ ಅಡಿಟೋರಿಯಂನಲ್ಲಿ ವಿಟ್ಲ ಹೋಬಳಿ ನಾಡಕಛೇರಿ ನೂತನ ಕಟ್ಟಡ ಉದ್ಘಾಟನೆ, ಕೃಷಿ ಇಲಾಖೆಯ ವಿಟ್ಲ ಹೋಬಳಿ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ೯೪ಸಿ. ಸಿ. ಹಕ್ಕು ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ರೈತರಿಗೆ ಸಹಾಯಧನದಲ್ಲಿ ಕೃಷಿ ಉಪಕರಣಗಳ ವಿತರಣೆ ಮಾಡಲಾಯಿತು. ವಿಟ್ಲ ಪಟ್ಟಣ ಪಂಚಾಯಿತಿಯ ಎಸ್. ಎಫ್. ಸಿ. ನಿಧಿಯ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನಡೆಸಲಾಯಿತು.

ಕಾರ್ಯಕ್ರಮವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ ಉದ್ಘಾಟಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ತಹಸೀಲ್ದಾರ ವಿ. ಎಸ್. ಸತೀಶ್, ಗ್ರೇಡ್ ೨ ತಹಸೀಲ್ದಾರ ದಯಾನಂದ, ಕೃಷಿ ಇಲಾಖೆಯ ವೀಣಾ, ಗೃಹ ಮಂಡಳಿಯ ಸಿ. ಕೆ. ಮಂಜುಳಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಯಪ್ರಕಾಶ್, ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಪದ್ಮನಾಭ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗೋಪಾಲ ನಾಯ್ಕ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಬಲ್ನಾಡು, ಪಟ್ಟಣ ಪಂಚಾಯಿತಿಯ ಸದಸ್ಯರು ಹಾಜರಿದ್ದರು.

ಪಟ್ಟಣ ಪಂಚಾಯಿತಿಯ ಸದಸ್ಯರಾದ ಅರುಣ್ ವಿಟ್ಲ ಸ್ವಾಗತಿಸಿದರು. ರವಿಪ್ರಕಾಶ್ ವಿಟ್ಲ ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...