Thursday, April 18, 2024

ಕಾರಿನಲ್ಲಿ ದಾಖಲಾತಿ ಇಲ್ಲದ ಲಕ್ಷಾಂತರ ರೂ ನಗದು ಹಣ ಪತ್ತೆ, ವಿಟ್ಲ ಪೊಲೀಸರ ಕಾರ್ಯಚರಣೆ

ಕಾರಿನಲ್ಲಿ ಯಾವುದೇ ದಾಖಲಾತಿ ಇಲ್ಲದ ಲಕ್ಷಾಂತರ ರೂ ನಗದು ಹಣ ಪತ್ತೆಯಾಗಿದ್ದು, ವಿಟ್ಲ ಪೊಲೀಸರ ಕಾರ್ಯಚರಣೆ ವೇಳೆ ನಗದು ಸಹಿತ ಕಾರನ್ನು ವಶಕ್ಕೆ ಪಡೆದುಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ.

ಕರ್ನಾಟಕ ರಾಜ್ಯ ಚುನಾವಣೆ ಪ್ರಯುಕ್ತ ಅಂತರರಾಜ್ಯ ಚೆಕ್‌ ಪೋಸ್ಟ್‌ನಲ್ಲಿ ವಿಟ್ಲ ಎಸ್.ಐ.ಸಂದೀಪ್ ಶೆಟ್ಟಿ ಸಿಬ್ಬಂದಿಗಳ ಜೊತೆ ಕರ್ತವ್ಯದಲ್ಲಿರುವ ವೇಳೆ ವಾಹನ ತಪಾಸಣೆ ನಡೆಸುತ್ತಿರುವಾಗ ಸಾಲೆತ್ತೂರು ಕಡೆಯಿಂದ ಬಾಕ್ರಬೈಲು ಕಡೆಗೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾಗ ಗಮನಕ್ಕೆ ಬಂದಿದೆ.

ಚಾಲಕ ಬಶೀರ್ ಎಂಬಾತನ ಕಾರಿನ ಡ್ಯಾಶ್‌ ಬೋರ್ಡ್‌‌ನಲ್ಲಿ 500 ರೂಪಾಯಿ ಮುಖ ಬೆಲೆಯ ತಲಾ 100 ನೋಟುಗಳಿರುವ 3 ಬಂಡಲ್‌ಗಳು ಇದ್ದು ಇದರಲ್ಲಿ ಒಟ್ಟು ರೂಪಾಯಿ 1.50,000/- ನಗದು ಪತ್ತೆಯಾಗಿದೆ.

ಈ ಹಣದ ಬಗ್ಗೆ ವಿಚಾರಣೆ ನಡೆಸಿದ ಪೋಲೀಸರಿಗೆ ಯಾವುದೇ ದಾಖಲೆಗಳು ಸಿಗದ ಇದ್ದ ಕಾರಣ ಸಂಶಯವಾಗಿದ್ದು,ಹಣ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...