Sunday, April 7, 2024

ಇಬ್ಬರು ಆರೋಪಿಗಳಿಂದ ಕೊಲೆ ಬೆದರಿಕೆ : ಕಟ್ಟಿಗೆ ಕೊಠಡಿಗೆ ಬೆಂಕಿ ಇಟ್ಟು ನಾಶ

ವಿಟ್ಲ: ಕರೋಪಾಡಿ ಗ್ರಾಮದ ಕೆದುಮೂಲೆ ಎಂಬಲ್ಲಿ ಮೋರಿ ಕಾಮಗಾರಿಗೆ ಆಕ್ಷೇಪಿಸಿದ ವ್ಯಕ್ತಿ ಮತ್ತು ಅವರ ಪುತ್ರಿಗೆ ಇಬ್ಬರು ಆರೋಪಿಗಳು ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿ, ಮನೆ ಸಮೀಪವಿದ್ದ ಕಟ್ಟಿಗೆಯಿರುವ ಕೊಠಡಿಗೆ ಬೆಂಕಿ ಹಾಕಿದ ಘಟನೆ ಸಂಭವಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆರೆಮನೆಯವರಾದ ರಝಾಕ್‌ ಹಾಗೂ ಮೂಸೆ ಕಲಿಂ ಅವರು ಮಹಮ್ಮದ್ ಅವರ ಮನೆ ಮುಂದೆ ಮೋರಿ ಕಾಮಗಾರಿ ನಡೆಸುತ್ತಿದ್ದುದನ್ನು ಮಹಮ್ಮದ್‌ ಆಕ್ಷೇಪಿಸಿದ್ದರು. ಸಿಟ್ಟಿಗೆದ್ದ ರಝಾಕ್‌ ಮತ್ತು ಮೂಸೆ ಕಲಿಂ ಅವರಿಬ್ಬರು ಮಹಮ್ಮದ್‌ ಅವರನ್ನು ದೂಡಿ ಹಾಕಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಕಿಟಕಿಯನ್ನು ಒಡೆದು, ಅವಾಚ್ಯ ಶಬ್ದಗಳಿಂದ ಬೈದು, ಮನೆಗೆ ತಾಗಿಕೊಂಡಿರುವ ಕಟ್ಟಿಗೆ ಸಂಗ್ರಹಿಸುವ ಕೊಠಡಿಗೆ ಬೆಂಕಿ ಹಚ್ಚಿ, ಕೊಲ್ಲುವ ಬೆದರಿಕೆ ಹಾಕಿ ಓಡಿ ಹೋಗಿದ್ದಾರೆ ಎಂದು ಮಹಮ್ಮದ್ ಅವರ ಪುತ್ರಿ ಝೋರಾ ಅವರು ದೂರು ನೀಡಿದ್ದಾರೆ. ಅಲ್ಲದೆ ಅವರ ಕಟ್ಟಿಗೆ ಸಂಗ್ರಹಿಸುವ ಕೊಠಡಿ ಸಂಪೂರ್ಣ ಸುಟ್ಟು ಹೋಗಿದ್ದಲ್ಲದೆ ಮನೆಯ ಕಿಟಕಿಯ ಗಾಜು ಪುಡಿಯಾಗಿ ಒಟ್ಟು 25,000/- ರೂ ನಷ್ಟವಾಗಿದೆ ಎಂದೂ ಅವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...