Tuesday, April 16, 2024

ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ೨೦೨೨ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

ವಿಟ್ಲ: ೨೦೨೨ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರು ಆಯ್ಕೆಯಾಗಿದ್ದಾರೆ.

ಗಂಭೀರ ಪ್ರಕರಣಗಳ ತನಿಖೆ ಹಾಗೂ ಪತ್ತೆ ಕಾರ್ಯದಲ್ಲಿ ಸಮಗ್ರವಾಗಿ ಕರ್ತವ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ನಾಗರಾಜ್ ರವರನ್ನು ಆಯ್ಕೆ ಮಾಡಲಾಗಿದೆ. ೨೦೦೭ನೇ ಬ್ಯಾಚ್ ನ ಪಿಎಸ್ ಐ ಅಗಿರುವ ಹೆಚ್.ಈ. ನಾಗರಾಜ್ ರವರು ಆರಂಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪ್ರೋಬೆನರಿ ತರಬೇತಿ ಮುಗಿಸಿ ಚಿಕ್ಕಮಂಗಳೂರು ತರಿಕೆರೆ ಪೊಲೀಸ್ ಠಾಣೆಯಲ್ಲಿ ಎಸ್.ಐ. ಆಗಿ ಕರ್ತವ್ಯ ಆರಂಭಿಸಿದ್ದರು. ಆ ಬಳಿಕ ಕಡಬ, ಬಂಟ್ವಾಳ ಗ್ರಾಮಂತರ, ಪುತ್ತೂರು ಸಂಚಾರ, ವಿಟ್ಲ, ವೇಣೂರು ಠಾಣೆಯಲ್ಲಿ ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿ ಅಲ್ಲಿಂದ ಇನ್ಸ್ ಪೆಕ್ಟರ್ ಆಗಿ ಭಡ್ತಿ ಹೊಂದಿ ಭಟ್ಕಳ ಕೋಸ್ಟಲ್ ಸೆಕ್ಯೂರಿಟಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಮೆಲ್ದರ್ಜೆಗೇರಿದ್ದ ವಿಟ್ಲ ಪೊಲೀಸ್ ಠಾಣೆಗೆ ಪ್ರತರಮ ಇನ್ಸ್ ಪೆಕ್ಟರ್ ಆಗಿ ಆಗಿಮಿಸಿ, ಇದೀಗ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಧಕ್ಷ ಪೊಲೀಸ್ ಅಧಿಕಾರಿಯಾಗಿರುವ ಹೆಚ್.ಈ. ನಾಗರಾಜ್ ರವರು ಹಲವಾರು ಕಠಿಣ ಪ್ರಕರಣಗಳನ್ನು‌ ಬೇಧಿಸುವಲ್ಲಿ ಸಫಲರಾಗಿದ್ದರು ಮಾತ್ರವಲ್ಲದೆ ಎಲ್ಲರೊಂದಿಗೂ ಉತ್ತಮ‌ ಭಾಂದವ್ಯ ಹೊಂದಿದ್ದರು. ನಾಗರಾಜ್ ರವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದಾರೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...